ಬೆಂಗಳೂರು: 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 ಯೋಜನೆಗಳು ಮಾತ್ರ ಬೆಂಗಳೂರು ಜಿಲ್ಲೆಯಲ್ಲಿದ್ದು, ಉಳಿದ 217 ಯೋಜನೆಗಳು ಹೊರಗಿನ ಜಿಲ್ಲೆಗಳಲ್ಲಿವೆ ಎಂದರು.
ಇದನ್ನೂ ಓದಿ- ನಿಜ ಹೇಳಿ ಪ್ರಧಾನಮಂತ್ರಿಗಳೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು?: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಜಿಲ್ಲೆಯಲ್ಲಿ 21,537 ಕೋಟಿ ರೂ. ಹೂಡಿಕೆ ಆಗುತ್ತಿದ್ದು, 19,243 ಉದ್ಯೋಗ ಸೃಷ್ಟಿ ಆಗಲಿವೆ. ಉಳಿದ ಜಿಲ್ಲೆಗಳಲ್ಲಿ 28,488 ಕೋಟಿ ರೂ. ಬಂಡವಾಳ ಹೂಡಿಕೆ ಆಗುತ್ತಿದ್ದು, 38,808 ಮಂದಿಗೆ ಉದ್ಯೋಗ ಸಿಗಲಿವೆ ಎಂದು ಅವರು ಅಂಕಿಅಂಶಗಳ ಸಮೇತ ವಿವರಿಸಿದರು.
ಇದನ್ನೂ ಓದಿ- ಜೆಬಿಎಫ್ ಕಂಪನಿ ಬಿಕ್ಕಟ್ಟು: 34 ಮಂದಿಗೆ ಉದ್ಯೋಗ ಕಲ್ಪಿಸಲು ಗೇಲ್ ಜತೆ ಮಾತುಕತೆ- ಸಚಿವ ಎಂಬಿ ಪಾಟೀಲ
ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಮಿಕ್ಕ ಭಾಗಗಳಲ್ಲಿ ಉದ್ದಿಮೆಗಳು ನೆಲೆಯೂರಿ, ಉದ್ಯೋಗ ಸೃಷ್ಟಿಯಾಗುವಂತೆ ಮಾಡಲು ಸರಕಾರವು ಬಿಯಾಂಡ್ ಬೆಂಗಳೂರು ಉಪಕ್ರಮವನ್ನು ಆರಂಭಿಸಿದ್ದು, ವಿವಿಧೆಡೆಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕಾ ನೀತಿಯಲ್ಲಿ ಹಲವು ಪ್ರೋತ್ಸಾಹಧನ ಮತ್ತು ವಿನಾಯಿತಿಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.