ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕೊಪ್ಪಳದಲ್ಲಿ ಮಾರ್ಚ್ 15 ರಂದು ರಂದು ವಾಕ್ ಇನ್ ಇಂಟರ್‌ವ್ಯೂವ್ ಆಯೋಜಿಸಲಾಗಿದೆ. ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲಿದ್ದು, ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- Lok Sabha Election 2024: ಚುನಾವಣೆಗೂ ಮುನ್ನ ಆನ್‌ಲೈನ್‌ನಲ್ಲಿ ವೋಟರ್ ಐಡಿ ವಿಳಾಸವನ್ನು ಸುಲಭವಾಗಿ ಅಪ್ಡೇಟ್ ಮಾಡಿ


ಅಂದು ಬೆಳಿಗ್ಗೆ 10 ರಿಂದ 1:30 ಗಂಟೆಯವರೆಗೆ ವಾಕ್ ಇನ್ ಇಂಟರ್‌ವ್ಯೂವ್ ನಡೆಯಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. 18 ರಿಂದ 30 ವರ್ಷ ವಯೋಮಾನದ ಪಿಯುಸಿ/ತತ್ಸಮಾನ, ಐಟಿಐ,  ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ವಿದ್ಯಾರ್ಹತೆ ಹೊಂದಿದ ಯುವಕ ಮತ್ತು ಯುವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು.


ಇದನ್ನೂ ಓದಿ- ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಳ : ನಿಯೋಗದೊಂದಿಗೆ ಮುಖ್ಯಮಂತ್ರಿಗೆ ಮನವಿ


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ದೂ.ಸಂ: 08539-220859 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.