Job Alert: SSLC ಪಾಸ್ ಆಗಿದ್ರೆ ರೈಲ್ವೆ ಇಲಾಖೆಯ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ
Indian Railway Recruitment 2024: ಅಭ್ಯರ್ಥಿಗಳು ರೈಲ್ವೆ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು
Indian Railway Recruitment 2024: ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9,144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ: ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು. ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್‌ಗೆ ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್ ಮತ್ತು ಟೆಕ್ನಿಷಿಯನ್ IIIಗೆ 10ನೇ ತರಗತಿ, 12ನೇ ತರಗತಿ, ಐಟಿಐ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನೂ ಓದಿ: ಧಾನ ಧರ್ಮ ಮಾಡೋ ಕೈ ಅಧಿಕಾರದಲ್ಲಿದ್ದರೆ ಚೆಂದ
ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 36 ವರ್ಷ ಮೀರಿರಬಾರದು. ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್‌ಗೆ 18ರಿಂದ 36 ವರ್ಷ ಮತ್ತು ಟೆಕ್ನಿಷಿಯನ್ IIIಗೆ 18 ರಿಂದ 33 ವರ್ಷ
ವಯೋಮಿತಿ ಸಡಿಲಿಕೆ: OBC (NCL) ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ: ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್‌ಗೆ ಮಾಸಿಕ ₹29,200 ಮತ್ತು ಟೆಕ್ನಿಷಿಯನ್ IIIಗೆ ಮಾಸಿಕ ₹19,900
ಅರ್ಜಿ ಶುಲ್ಕ: SC/ST, ಮಾಜಿ ಸೈನಿಕರು, PwBD, ಮಹಿಳಾ, ಟ್ರಾನ್ಸ್ಜೆಂಡರ್, EBC ಅಭ್ಯರ್ಥಿಗಳಿಗೆ 250 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅಭ್ಯರ್ಥಿಳು ಆನ್‌ಲೈನ್ ಮೂಲಕವಷ್ಟೇ ಶುಲ್ಕವನ್ನು ಪಾವತಿಸಬೇಕು.
ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರತ
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಉದ್ದಿಮೆದಾರರಿಗೆ ನೋಟಿಸ್ ಕೊಟ್ಟು ಲೈಸನ್ಸ್ ರದ್ದು
ಅರ್ಜಿ ಸಲ್ಲಿಸುವುದು ಹೇಗೆ..?: ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಲಿಂಕ್ https://www.rrbchennai.gov.in/ ಮೂಲಕ ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಬಹುದು. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.