ಬೆಂಗಳೂರು:ಭಾರತೀಯ ವಾಯುಪಡೆಯ ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ನೊಂದಣಿಗೆ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮರುಕಳಿಸಿದ ಪ್ರಕರಣ: ಟೊಮೊಟೊ ಬಾತ್ ಸೇವಿಸಿ ಮೊರಾರ್ಜಿ ಶಾಲೆಯ 7 ವಿದ್ಯಾರ್ಥಿಗಳು ಅಸ್ವಸ್ಥ


ವಿದ್ಯಾರ್ಹತೆಯು ದ್ವಿತೀಯ ಪಿ.ಯು.ಸಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ, ಇತರೆ ವಿಷಯಗಳಲ್ಲಿ ಶೇ.50 ರಷ್ಟು ಅಂಕ ಮತ್ತು ಇಂಗ್ಲೀಷ್‍ನಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಯೋಮಿತಿಯು ಅಭ್ಯರ್ಥಿಯು 2003 ಜೂನ್ 27 ರಿಂದ 2006 ಡಿಸೆಂಬರ್ 27 ರ ನಡುವೆ ಜನಿಸಿರಬೇಕು.


ಇದನ್ನೂ ಓದಿ: ಬಿಜೆಪಿ ಮತ್ತು ಸಂಘ ಪರಿವಾರ ಮೀಸಲಾತಿ ಉಪಕ್ರಮಗಳಿಗೆ ವಿರುದ್ಧವಾಗಿದೆ-ಸಿಎಂ ಸಿದ್ದರಾಮಯ್ಯ


ಅಭ್ಯರ್ಥಿಗಳು ನೊಂದಾಯಿಸಿಕೊಳ್ಳಲು ಕೊನೆಯ ದಿನ ಆಗಸ್ಟ್ 18 ಆಗಿರುತ್ತದೆ. ಆನ್‍ಲೈನ್ ನೊಂದಣಿಗಾಗಿ https://agnipathvayu.cdac.in ಲಿಂಕ್ ಬಳಸಬಹುದಾಗಿದೆ. ಆನ್‍ಲೈನ್ ಪರೀಕ್ಷೆಯು ಅಕ್ಟೋಬರ್ 13 ರಂದು ನಡೆಯಲಿದೆ.


ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-273988 ಅಥವಾ https://careerindianairforce.cdac.in ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.