Anganwadi Recruitment: ಅಂಗನವಾಡಿಯ 13,593 ಹುದ್ದೆಗಳ ನೇಮಕಾತಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ
Anganwadi Recruitment 2024: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಈ ಪೈಕಿ ವಿಶೇಷ ಚೇತನ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ೧೦ ವರ್ಷ ಸಡಿಲಿಕೆ ಇರಲಿದೆ.
Anganwadi Recruitment 2024: ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿಗಳಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ. ಇದುವರೆಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುತ್ತಿದ್ದ ರಾಜ್ಯ ಸರ್ಕಾರವು, ಇದೇ ಮೊದಲ ಬಾರಿರಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ಅಂಗನವಾಡಿಗಳಲ್ಲಿ ಒಟ್ಟು 13,593 ಅಂಗನವಾಡಿ ಶಿಕ್ಷಕರಿಯರು, ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳ ಜೊತೆಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ನಡೆದ ಸಭೆಯಲ್ಲಿ ತೀರ್ಮಾನಿಸಿತ್ತು, ಇದೀಗ ಅರ್ಜಿ ಆಹ್ವಾನಿಸಿದೆ. ಈ ಮೊದಲು ಆಪ್‌ಲೈನ್ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು. ಪ್ರಾಯೋಗಿಕವಾಗಿ ಕೆಲವು ಜಿಲ್ಲೆಗಳಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಸಿದ್ದ ಸರ್ಕಾರ ಯಶಸ್ವಿಯಾಯ್ತು. ಹೀಗಾಗಿ ಇದೀಗ ಈ ಆನ್‌ಲೈನ್ ಪ್ರಕ್ರಿಯೆಯನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಿದೆ.
ಇದನ್ನೂ ಓದಿ: ತುಳುನಾಡಿಗೆ ಬಂದು ಕೊರಗಜ್ಜ ದೈವದ ಹರಕೆ ತೀರಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್! ಫೋಟೋ ವೈರಲ್
ಯಾರು ಅರ್ಜಿ ಸಲ್ಲಿಸಬಹುದು..?: ಈ ಅಂಗನವಾಡಿ ಹುದ್ದೆಗಳಿಗೆ ಆಯಾ ಜಿಲ್ಲೆಯವರು, ತಾಲೂಕಿನವರು ಅಂದರೆ ಸ್ಥಳೀಯರು ಆನ್‌ಲೈನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಬೇರೆ ಬೇರೆ ಜಿಲ್ಲೆ, ತಾಲೂಕಿನವರ ಅರ್ಜಿಯನ್ನು ಪರಿಗಣಿಸುವುದಿಲ್ಲ. ವಾಸದ ದೃಢೀಕರಣ, DAR ನಂಬರ್, ಆಧಾರ್ ಸಹಿತ ಆಯಾ ಗ್ರಾಮದವರು ಕೇಂದ್ರದ 3KM ವ್ಯಾಪ್ತಿಯವರು ಅರ್ಜಿ ಸಲ್ಲಿಸಿದರೆ ಪರಿಗಣಿಸಲಾಗುವುದು ಅಂತಾ ಸೂಚಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 12ನೇ ತರಗತಿ, ಡಿಪ್ಲೋಮಾ ECCI, ತತ್ಸಮಾನ ಶಿಕ್ಷಣದಲ್ಲಿ ತೇರ್ಗಡೆ ಹೊಂದಿರಬೇಕು. ಸಹಾಯಕಿ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಈ ಪೈಕಿ ವಿಶೇಷ ಚೇತನ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು
ವಿದ್ಯಾರ್ಹತೆ ಪ್ರಮಾಣ ಪತ್ರ
ವಾಸಸ್ಥಳದ ದೃಢೀಕರಣ ಪತ್ರ
ಜನನ ಪ್ರಮಾಣ ಮತ್ತು ವಯಸ್ಸಿನ ದೃಢೀಕರಣ
ಶೈಕ್ಷಣಿಕ ಉತ್ತೀರ್ಣತೆ/SSLC ಇಲ್ಲ PUC ಅಂಕಪಟ್ಟಿ
ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಯ ಪ್ರಮಾಣ ಪತ್ರ
ವಿಚ್ಚೇದಿತರಾಗಿದ್ದಲ್ಲಿ ಅದರ ಪ್ರಮಾಣ ಪತ್ರ
ಯೋಜನಾ ನಿರಾಶ್ರಿತರಾಗಿದ್ದಲ್ಲಿ ಅದಕ್ಕೆ ಸಂಬಂಧಿಸಿದ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.karnemakaone.kar.nic.in/abcd/ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Daily GK Quiz: ಕರ್ನಾಟಕ ರಾಜ್ಯದ ಮೊದಲ ಮುಖ್ಯಮಂತ್ರಿ ಯಾರು?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.