ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ (ರಿ), ಹಳಿಯಾಳದ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 13 ದಿನಗಳ ಸಿಸಿ ಟವಿ ಇನ್ಸ್ಟಾಲೆಷನ್,  ಸರ್ವಿಸಿಂಗ್ ಹಾಗೂ 30 ದಿನಗಳ ಫೋಟೋಗ್ರಾಫಿ, ವಿಡಿಯೋಗ್ರಾಫಿ ಮತ್ತು ಮಹಿಳೆಯರಿಗಾಗಿ ಉಚಿತ ಹೊಲಿಗೆ ತರಬೇತಿಯ ನೋಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ :'ಪಿಎಸ್ಐ ಅಕ್ರಮ ನೇಮಕ ಪ್ರಕರಣದ ಎಲ್ಲಾ ಬಂಧಿತರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿ'


ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜುಲೈ 12 ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.


ಇದನ್ನೂ ಓದಿ : IB Recruitment 2022 : ಗುಪ್ತಚರ ಇಲಾಖೆಯಲ್ಲಿ 766 ಹುದ್ದೆಗಳಿಗೆ ಅರ್ಜಿ : ಹೆಚ್ಚಿನ ಮಾಹಿತಿಗೆ ಇಲ್ಲಿ ನೋಡಿ!


ತರಬೇತಿಯು ಜುಲೈ 14ರ ನಂತರ ಪ್ರಾರಂಭವಾಗುತ್ತಿದ್ದು, ಈ ಸಮಯದಲ್ಲಿ ಊಟ, ವಸತಿ ಉಚಿತವಾಗಿರುತ್ತದೆ. ತರಬೇತಿ ಅವಧಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ, ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರಧಿ ತಯಾರಿಕೆ ಬಗೆಗಿನ ಮಾಹಿತಿಯನ್ನು ನೀಡಲಾಗವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08284-295307, 220807,  9483485489, 9482188780, 8951819260, 9844796998, 8197022501 ಗೆ ಸಂಪರ್ಕಿಸಬಹುದು ಎಂದು ಆರ್ಸೆಟಿ ಸಂಸ್ಥೆಯ ನಿರ್ದೇಶಕ ಪ್ರಸನ್ನ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.