RVNL Recruitment 2024: ರೈಲ್ ವಿಕಾಸ್ ನಿಗಮ್​ ಲಿಮಿಟೆಡ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಜನರಲ್ ಮ್ಯಾನೇಜರ್(ಸಿವಿಲ್​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು.


COMMERCIAL BREAK
SCROLL TO CONTINUE READING

ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. 


ಇದನ್ನೂ ಓದಿ: ಮತದಾನ ಜಾಗೃತಿ ಕಾರ್ಯಕ್ರಮ : ರಾಷ್ಟ್ರ ಮುನ್ನೆಡಸಲು ಮತ ಚಲಾಯಿಸಿ, ಚುನಾವಣಾ ರಾಯಭಾರಿ ನಟ ರಮೇಶ್ ಅರವಿಂದ್


ವಿದ್ಯಾರ್ಹತೆ: ರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2024ಕ್ಕೆ ಗರಿಷ್ಠ 57 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ: ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹1,20,000-2,80,000 ಸಂಬಳವನ್ನು ನೀಡಲಾಗುತ್ತದೆ.


ಉದ್ಯೋಗದ ಸ್ಥಳ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ: ಸ್ಕ್ರೀನಿಂಗ್, Interaction ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ: 18/03/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 17 ಆಗಿರುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ  ವಿಳಾಸಕ್ಕೆ ಕಳುಹಿಸಬೇಕು. ಡಿಸ್ಪ್ಯಾಚ್ ವಿಭಾಗ, ನೆಲ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ಆರ್.ಕೆ.ಪುರಂ, ನವದೆಹಲಿ-110066


ಇದನ್ನೂ ಓದಿ: ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ಕೊಟ್ಟು ಸಾಕುತ್ತಿತ್ತು: ಯೋಗಿ ಆದಿತ್ಯನಾಥ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.