ಧಾರವಾಡ : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಖಾಲಿ ಇರುವ ಯುವಪರಿವರ್ತಕರ ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಪದವಿಯನ್ನು ಹೊಂದಿದ 21 ರಿಂದ 35 ವರ್ಷದೊಳಗಿನ ಕುಂದಗೋಳ, ಅಣ್ಣಿಗೇರಿ ಮತ್ತು ಅಳ್ನಾವರ ತಾಲೂಕಿನ ಅಭ್ಯರ್ಥಿಗಳು ಜೂನ್ 13 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ: ಪ್ರೀತಿ, ಕಂಬನಿ, ಭಾವನೆಗಳ ಬೆಲೆ ಹೇಳಲಿದ್ದಾನೆ ನಮ್ಮ 'ಚಾರ್ಲಿ'..!
ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸುವ ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆರ್.ಎನ್.ಶೆಟ್ಟಿ ಕ್ರೀಡಾಂಗಣ ಧಾರವಾಡ ವಿಳಾಸಕ್ಕೆ ಭೇಟಿ ನೀಡಬಹುದು. ಅಥವಾ ದೂರವಾಣಿ ಸಂಖ್ಯೆ 9448299673 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ