30 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯಿರುವÀವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : May 19, 2024, 03:32 PM IST
  • ಆಸಕ್ತರಿರುವ 18 ರಿಂದ 40 ವರ್ಷದೊಳಗಿನ, ಕನಿಷ್ಠ ಎಸ್‍ಎಸ್‍ಎಲ್‍ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
  • ಅರ್ಜಿಗಳನ್ನು ಮೇ 30 ರೊಳಗಾಗಿ ಸಲ್ಲಿಸಬೇಕು
  • 30 ಅಭ್ಯರ್ಥಿಗಳ ತಂಡದಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಶೇ.35 ರಷ್ಟು ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.15 ರಷ್ಟು ಆದ್ಯತೆ ನೀಡಲಾಗುವುದು
30 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ   title=
ಸಾಂಧರ್ಭಿಕ ಚಿತ್ರ

ಬಳ್ಳಾರಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯಿರುವÀವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಳ್ಳಾರಿಯಲ್ಲಿ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್ ತರಬೇತಿ, ಸಂಡೂರಿನಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿ, ಕುರುಗೋಡುನಲ್ಲಿ ಫ್ಯಾಷನ್ ಡಿಸೈನಿಂಗ್ ತರಬೇತಿ, ಸಿರಗುಪ್ಪದಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೈಯನ್ಸ್ ತರಬೇತಿ ಹಾಗೂ ಕಂಪ್ಲಿಯಲ್ಲಿ ಮೊಬೈಲ್ ಫೋನ್ಸ್ ರಿಪೇರ್ಸ್ ಮತ್ತು ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.

ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅರೆಸ್ಟ್‌ ವಾರೆಂಟ್‌ ಜಾರಿ!

ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ಧಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣ ಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ ಹಾಗೂ ಮಾಹಿತಿ ನೀಡಲಾಗುವದು.

ಆಸಕ್ತರಿರುವ 18 ರಿಂದ 40 ವರ್ಷದೊಳಗಿನ, ಕನಿಷ್ಠ ಎಸ್‍ಎಸ್‍ಎಲ್‍ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಮೇ 30 ರೊಳಗಾಗಿ ಸಲ್ಲಿಸಬೇಕು.

30 ಅಭ್ಯರ್ಥಿಗಳ ತಂಡದಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಶೇ.35 ರಷ್ಟು ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.15 ರಷ್ಟು ಆದ್ಯತೆ ನೀಡಲಾಗುವುದು.

ಇದನ್ನೂ ಓದಿ: RCB Top-5 Players: ಈ ಆಟಗಾರರಿಂದಲೇ ರಾಯಲ್‌ ಚಾಲೆಂಜರ್ಸ್‌ ಪ್ಲೇಆಫ್‌ ತಲುಪಿದ್ದು!!

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ-583102 ಇಲ್ಲಿಗೆ ಭೇಟಿ ನೀಡಬಹುದು ಹಾಗೂ ಮೊ.9449226221, 7483538942, 9986332736 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದು ಎಂದು ಸಿಡಾಕ್‍ನ ಜಂಟಿ ನಿರ್ದೇಶಕ ಜಿ.ಯು.ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

 

Trending News