ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರವರ್ಗ-1, ಎಸ್.ಸಿ. & ಎಸ್.ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 2.50 ರೂ.ಲಕ್ಷದ ಒಳಗೆ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯು 1 ಲಕ್ಷ ರೂ ಮಿತಿಯಲ್ಲಿರಬೇಕು.
ಇದನ್ನೂ ಓದಿ: ಹಳೆ ಸಂಸತ್‌ನಿಂದ ಹೊಸ ಸಂಸತ್‌ಗೆ ಪ್ರವೇಶ ಮಾಡಿದ ಸಂಸದರು
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿದ್ದು, ಅರ್ಜಿಯನ್ನು ವೆಬ್‌ಸೈಟ್ www.bcwd.karnataka.gov.in ನಲ್ಲಿ ಸಲ್ಲಿಸಬೇಕು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ನೋಡಬಹುದು.
ಇದನ್ನೂ ಓದಿ: ತಮಿಳುನಾಡಿಗೆ ನೀರು ಹರಿಸಲು ಪ್ರಾಧಿಕಾರ ಆದೇಶ
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwd.hostels@karnataka.gov.in ಮುಖಾಂತರ ಅಥವಾ ಜಿಲ್ಲಾ ಅಥವಾ ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ 080-8050370006 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.