ಹುಬ್ಬಳ್ಳಿ: ಹಿಂದುಸ್ಥಾನ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ವಿವಿಧ ವೃತ್ತಿಗಳಲ್ಲಿ ಶಿಶಿಕ್ಷು ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಹಾಗೂ ಐ.ಟಿ.ಐ. ಟ್ರೇಡಗಳಾದ ಫಿಟ್ಟರ, ಟರ್ನರ, ಮಷಿನಿಸ್ಟ, ಶೀಟಮೆಟಲ್ ವರ್ಕರ, ಪೌಂಡ್ರಿಮನ್, ಇಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ(COPA) ವೃತ್ತಿಗಳಲ್ಲಿ ಉತ್ತೀರ್ಣರಾದವರು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: ‘ಕರ್ನಾಟಕದ ಪ್ರಗತಿಗೆ ಮಲಯಾಳಿಗಳ ಕೊಡುಗೆ ಅಪಾರ’
ಅಭ್ಯರ್ಥಿಗಳು ಅಪ್ರೆಂಟಿಸ್‌ಶಿಪ್ ಪೋರ್ಟಲ್ www.apprenticeship.gov.in ಅಪ್ರೆಂಟಿಸ್ ಎಂದು ನೋಂದಾಯಿಸಿಕೊಂಡು, ನೋಂದಣಿ ಸಂಖ್ಯೆಯನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ ಝೆರಾಕ್ಸ ಪ್ರತಿ, ಜಾತಿ, ವರ್ಗ ಪ್ರಮಾಣ ಪತ್ರ, ಆಧಾರ ಕಾರ್ಡ್, ಎರಡು ಪಾಸಪೋರ್ಟ ಅಳತೆಯ ಭಾವಚಿತ್ರದೊಂದಿಗೆ ಅಕ್ಟೋಬರ್ 14 ರೊಳಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ನವನಗರ ಹುಬ್ಬಳ್ಳಿ ಕಚೇರಿಗೆ ಖುದ್ದಾಗಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836 – 2225288 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಹುಬ್ಬಳ್ಳಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರಾದ ಗಿರೀಶ್ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.