ಕಲಬುರಗಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿಂದ ಕಲಬುರಗಿಯ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯಲ್ಲಿ ಆರು ತಿಂಗಳ ಅವಧಿಯ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ (ಡಿ.ಸಿ.ಎಂ.) ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮಳೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಅವಾಂತರ ಬುಡ ಸಮೇತ ಕಿತ್ತು ಬಿದ್ದ ಅಪರೂಪದ ಮರಗಳು


ಸಹಕಾರ ಸಂಘ, ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಪದೋನ್ನತ್ತಿ ಹಾಗೂ ವೇತನ ಬಡ್ತಿಗೆ ಈ ತರಬೇತಿ ಕಡ್ಡಾಯವಾಗಿದೆ. ಇದಲ್ಲದೇ ಖಾಸಗಿ ಅಭ್ಯರ್ಥಿಗಳಿಗೆ ವಿವಿಧ ಡಿ.ಸಿ.ಸಿ ಬ್ಯಾಂಕ್‍ಗಳು, ಅಪೆಕ್ಸ್ ಬ್ಯಾಂಕ್ ಹಾಗೂ ವಿವಿಧ ಸಹಕಾರ ಸಂಘಗಳ ಸಿಬ್ಬಂದಿಗಳ ನೇಮಕಾತಿಗಾಗಿ ಏರ್ಪಡಿಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗಿದೆ.


ಪ್ರಸಕ್ತ ಅವಧಿಯ ತರಬೇತಿಯು 2023ರ ಜುಲೈ ತಿಂಗಳಿಂದ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಶಿಷ್ಯವೇತನ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ತರಬೇತಿಯನ್ನು ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಆದರ್ಶ ನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ, ಕಲಬುರಗಿ-585105 ಈ ಕಚೇರಿ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.


ಇದನ್ನೂ ಓದಿ: ದಾಖಲೆ ಇಲ್ಲದೇ ಕಾರಿನಲ್ಲಿ ಕೋಟಿ ಕೋಟಿ ಹಣ ಸಾಗಾಟ


ಮತ್ತಿತರ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08472-245340, ಮೊಬೈಲ್ ಸಂಖ್ಯೆ 9916726886, 9742307153, 9113916753 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ