ಪಿಯುಸಿ ಓದುತ್ತಿರುವ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಮಾರ್ಚ್ 31, 2023ರ ಒಳಗೆ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಮಾರ್ಚ್ 31, 2023ರ ಒಳಗೆ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ನಮ್ಮ ಸರ್ಕಾರದ ಕ್ಷೀರ ಭಾಗ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ವುಗೆ ಗಳಿಸಿದೆ: ಸಿಎಂ ಸಿದ್ದರಾಮಯ್ಯ
ಕಾರ್ಮಿಕ ಅಧಿಕಾರಿಗಳ ಕಛೇರಿ ಉಪವಿಭಾಗ 1 ಮತ್ತು 2 ಹುಬ್ಬಳ್ಳಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಚಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿಗಳ ಕಛೇರಿ ಉಪವಿಭಾಗ 1 ಮತ್ತು 2 ರಲ್ಲಿ ಅಥವಾ ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು ಹುಬ್ಬಳ್ಳಿ-ಧಾರವಾಡ ಹಾಗೂ ತಾಲೂಕಾ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20, 2023 ಕೊನೆ ದಿನವಾಗಿದೆ.
ಇದನ್ನೂ ಓದಿ: ಬಟ್ಟೆ ಬದಲಿಸುವಂತೆ ಮಹಿಳೆಯರನ್ನ ಬದಲಿಸುತ್ತಾನೆ : ಇನ್ಸ್‌ಪೆಕ್ಟರ್ ವಿರುದ್ಧ ಪತ್ನಿ ದೂರು
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿ ಅಥವಾ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕರ ಕಛೇರಿಯನ್ನು ಸಂಪರ್ಕಿಸಬಹುದೆಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.