ಧಾರವಾಡ:  ಧಾರವಾಡ ಜಿಲ್ಲೆಯ ರೈತ ಮಕ್ಕಳಿಗಾಗಿ 2024-25 ನೇ ಸಾಲಿಗೆ, 10 ತಿಂಗಳ ಅವಧಿಯ (ಮೇ 02, 2024 ರಿಂದ ಮೇ 28, 2025 ರವರೆಗೆ) ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮಹಿಳಾ-05 ಹಾಗೂ ಪುರುಷ-10 ಒಟ್ಟು- 15 ಅಭ್ಯರ್ಥಿಗಳಿಂದ ತೋಟಗಾರಿಕೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅಭ್ಯರ್ಥಿಗಳು ಅರ್ಜಿಗಳನ್ನು, ತೋಟಗಾರಿಕೆ ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ ಧಾರವಾಡ ಕಛೇರಿಯಲ್ಲಿ ಸಲ್ಲಿಸಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 30 ಮತ್ತು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ (ಐಪಿಓ) ಅಥವಾ ಬ್ಯಾಂಕ್ ಡಿಮ್ಯಾಂಡ್ ಡ್ರಾಪ್ಟ್‍ನ್ನು ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಧಾರವಾಡ ಅವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಅರ್ಜಿ ಶುಲ್ಕದ ಬಾಬತ್ತು ಲಗತ್ತಿಸಬೇಕು.


ಇದನ್ನೂ ಓದಿ : ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ ನೇಮಕ


ಅರ್ಜಿ ಫಾರಂಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಸ್ಟೇಷನ್ ರಸ್ತೆ, ಧಾರವಾಡ ಅವರ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಮಾರ್ಚ 1 ರಿಂದ 30, 2024 ರವರೆಗೆ ಡೌನ್‍ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿ ಪೂರ್ಣ ಪ್ರಮಾಣದ ದಾಖಲಾತಿಗಳೊಂದಿಗೆ ಎಪ್ರೀಲ್ 1, 2024 ರ ಸಂಜೆ 5:30 ಗಂಟೆಯೊಳಗಾಗಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಧಾರವಾಡ ಕಛೇರಿ ಅಥವಾ ದೂರವಾಣಿ: 0836-2957801 ಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.