ಹೊಯ್ಸಳ, ಕೆಳದಿ ಚೆನ್ನಮ್ಮ, ಮಕ್ಕಳ ದಿನಾಚರಣೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಒಳಗೊಂಡಂತೆ ಮಕ್ಕಳ ದಿನಾಚರಣೆ-2023ರ ಪ್ರಶಸ್ತಿಗಾಗಿ ನಾಮ ನಿರ್ದೇಶನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಒಳಗೊಂಡಂತೆ ಮಕ್ಕಳ ದಿನಾಚರಣೆ-2023ರ ಪ್ರಶಸ್ತಿಗಾಗಿ ನಾಮ ನಿರ್ದೇಶನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2023ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಈ ಪ್ರಕರಣವು 2022ರ ಆಗಸ್ಟ್ 01ರಿಂದ 2023ರ ಜುಲೈ 31ರೊಳಗೆ ನಡೆದಿರಬೇಕು. 2005ರ ಆಗಸ್ಟ್ 01ರ ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದನ್ನೂ ಓದಿ: ಪಿರಿಯೇಡ್ಸ್ ವೇಳೆ ಕಾಣಿಸಿಕೊಳ್ಳುವ ನೋವನ್ನು ಥಟ್ಟಂತ ನಿವಾರಿಸುತ್ತದೆ ಶುಂಠಿ
ವ್ಯಕ್ತಿ ಹಾಗೂ ಸಂಸ್ಥೆಗಳಿಗೂ ಪ್ರಶಸ್ತಿ: ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ.ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಮಕ್ಕಳ ದಿನಾಚರಣೆ-2023ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಆಗಸ್ಟ್ 31ರೊಳಗೆ .ಸಲ್ಲಿಸಬೇಕು.
ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.