ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗಾಗಿ ಧಾರವಾಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಧಾರವಾಡ : ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗಾಗಿ ಧಾರವಾಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಹೊಂದಾಣಿಕೆ ರಾಜಕೀಯ ಎಂದಿರುವ ಪ್ರತಾಪ್ ಮಾತಿಗೆ ತೂಕ, ಮಾನ್ಯತೆ ಇಲ್ಲಾ: ಸಚಿವ ಎಚ್.ಸಿ.ಎಂ
ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ. 2.50 ಲಕ್ಷ ಆದಾಯ ಮಿತಿ ಹೊಂದಿರುವ, 40 ವರ್ಷ ವಯೋಮಾನದೊಳಗಿರುವ ಮತ್ತು ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಕಾನೂನು ಪದವೀಧರರು www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಸರ್ಕಾರ ಬಂದು 20 ದಿನ ಆಗಿಲ್ಲ, ಯಾವ ಪರ್ಸೇಂಟೇಜ್ ತಗೋಳೋದು: ಎಚ್ ಡಿಕೆಗೆ ವೆಂಕಟೇಶ್ ಟಾಂಗ್
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ಗಳ ಶಿಷ್ಯವೇತನವನ್ನು 2 ವರ್ಷಗಳ ಕಾಲ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 15 ಕೂನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0836-2447201 ಹಾಗೂ ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ.ಕಂಪೌಂಡ, ಧಾರವಾಡ ಇವರ ಕಛೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.