ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪ್ರಥಮ ಮುದ್ರಣ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ 2022ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪ್ರಕಾರದ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ 2022ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪ್ರಕಾರದ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳನ್ನು ಕನ್ನಡ, ಆಂಗ್ಲ ಇತರೆ ಭಾರತೀಯ ಭಾಷೆಗಳ ಗ್ರಂಥಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕ ಆಯ್ಕೆಗಾಗಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಹದಾಯಿ ಯೋಜನೆ: ಡಬಲ್ ಎಂಜಿನ್ ಸರ್ಕಾರದಿಂದ ವಂಚನೆ
2022ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥ ಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಬೆಂಗಳೂರು ಇಲ್ಲಿ ಜನವರಿ 31ರೊಳಗಾಗಿ ಕಳುಹಿಸಬೇಕು.
ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಮಾತ್ರ ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4 ನೇ ಮಹಡಿ, ಡಾ.ಅಂಬೇಡ್ಕರ ವಿಧಿ ಬೆಂಗಳೂರು ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿಗಳನ್ನು ಹೊಸಪೇಟೆ ನಗರಕೇಂದ್ರ ಗ್ರಂಥಾಲಯದಲ್ಲಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.080-22864990, 22867358ಗೆ ಸಂಪರ್ಕಿಸಬಹುದು ಗ್ರಂಥಾಲಯಾಧಿಕಾರಿಗಳು ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.