ಧಾರವಾಡ: ಇ.ಡಿ.ಸಿ.ಎಸ್. ನಿರ್ದೆಶನಾಲಯ ಮತ್ತು ಇ-ಆಡಳಿತ ಇಲಾಖೆಯಿಂದ ಜಿಲ್ಲೆಯ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ಒಂದು ಗ್ರಾಮ್ ಒನ್ ಕೇಂದ್ರಕ್ಕಾಗಿ ಫ್ರಾಂಚೈಸಿಯನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ (https://www.karnatakaone.gov.in/.../GramOneFranchiseeTerms) ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿ.ಯು.ಸಿ., ಐ.ಟಿ.ಐ, ಡಿಪ್ಲೊಮಾ, ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಯೊಂದಿಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು. ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಕನಿಷ್ಟ 100 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟಡದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್ ಮತ್ತು 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆಯೊಂದಿಗೆ ಇಲಾಖೆ ಕಾಲಕಾಲಕ್ಕೆ ಸೂಚಿಸುವ ಮಾನದಂಡಗಳಿಗೆ ಬದ್ಧರಾಗಿರುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಹೆಲ್ಪಡೆಸ್ಕ್ ಮೊಬೈಲ್ ಸಂಖ್ಯೆ 9019026687, 9019026697, 9019026690, 9019027696 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.