ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವವರಿಗೆ ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ನೇರ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ನೇರ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಈ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಮತ್ತು ಭಾರತದ IIT’S IIM’S, ISC, ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪದವಿ/ಸ್ನಾತಕೋತ್ತರ ಕೋರ್ಸ್ಗಳಿಗೆ ವಿದ್ಯಾಭ್ಯಾಸ ಮಾಡಲು ಸಂಪೂರ್ಣ ಕೋರ್ಸ್ಗೆ ೨೦ ಲಕ್ಷ ರೂ. ಗಳವರೆಗೆ ಸಾಲ ನೀಡಲಾಗುತ್ತದೆ.
ಇದನ್ನೂ ಓದಿ: ಗೃಹಜ್ಯೋತಿ ಯೋಜನೆಗೆ ಹೆಚ್ಚು ಹಣ ವಸೂಲಿ ಮಾಡಿದರೆ ಕಠಿಣ ಕ್ರಮ
ಅಭ್ಯರ್ಥಿಗಳ ವಯೋಮಿತಿ ೩೮ ವರ್ಷ ಮೀರರಬಾರದು. ನಿಗಮಕ್ಕೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನ ಮೇಲೆ ಮಾತ್ರ ಸಾಲ ಒದಗಿಸಲಾಗುತ್ತದೆ. ಇಂತಹ ಕೋರ್ಸ್ಗಳಿಗೆ ಆಯ್ಕೆಯಾದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು http//kmdconline.karnataka.gov.in ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಬೇಕು. ಈಗಾಗಲೇ ೨೦೨೩ರ ಜೂನ್ ೧೩ ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.ಅರ್ಜಿಯ ಜೊತೆಗೆ ಆನ್‌ಲೈನ್‌ನಲ್ಲಿ ನೊಂದಾಯಿಸಿರುವ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಕಲಬುರಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.