ಬೆಂಗಳೂರು: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಮಾರುಕಟ್ಟೆಯಲ್ಲಿ ಹರಿದಾಡುತ್ತಿದೆ 2 ವಿಧದ 500 ರೂ. ನೋಟುಗಳು: ಆರ್ ಬಿಐ ನೀಡಿದೆ ಮಹತ್ವದ ಅಪ್ ಡೇಟ್


ಪ್ರಕರಣವು ಆಗಸ್ಟ್ 01, 2022 ರಿಂದ ಜುಲೈ 31, 2023 ರೊಳಗೆ ನಡೆದಿರಬೇಕು ಆಗಸ್ಟ್ 01, 2005 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.


ಇದನ್ನೂ ಓದಿ : ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ, 3.5 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ


2023ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳಾಭಿವೃದ್ದಿ ಇಲಾಖೆ, ಧಾರವಾಡ ಕಛೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪನಿರ್ದೇಶಕರ ಕಛೇರಿಗೆ ಸೆಪ್ಟೆಂಬರ 15, 2023 ರೊಳಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.