National Institute Of Technology Recruitment 2024: ಕರ್ನಾಟಕದ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​​ಲೈನ್​/ಪೋಸ್ಟ್​​ ಮೂಲಕ ಅರ್ಜಿ ಸಲ್ಲಿಸಬಹುದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಮಾಹಿತಿ ತಂತ್ರಜ್ಞಾನ/ಮಾಹಿತಿ ವಿಜ್ಞಾನ ಎಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, M.E ಅಥವಾ M.Tech, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್/ಕಮ್ಯುನಿಕೇಷನ್ ಇಂಜಿನಿಯರಿಂಗ್/ಸಿಗ್ನಲ್ ಪ್ರೊಸೆಸಿಂಗ್/ಇಮೇಜ್ ಪ್ರೊಸೆಸಿಂಗ್/ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ನಲ್ಲಿ MS(R), M.Sc ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Special Train : ಮಂಗಳೂರಿನಿಂದ ನವದೆಹಲಿಗೆ ವಿಶೇಷ ರೈಲು ಸೇವೆ-ಸಮಯ, ಟಿಕೆಟ್‌ ದರಗಳ ವಿವರ ಇಲ್ಲಿದೆ


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ: ಮಾಸಿಕ ₹31,000


ಉದ್ಯೋಗದ ಸ್ಥಳ: ಸುರತ್ಕಲ್​


ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು.


ಡಾ.ಶ್ಯಾಮ್ ಲಾಲ್, ಪ್ರಧಾನ ತನಿಖಾಧಿಕಾರಿ ಮತ್ತು ಅಸೋಸಿಯೇಟ್ ಪ್ರೊಫೆಸರ್, E & C ಇಂಜಿನಿಯರಿಂಗ್ ವಿಭಾಗ, NITK ಸುರತ್ಕಲ್ ಮಂಗಳೂರು-575025


ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅರೆಸ್ಟ್ ; ಮದ್ಯ ಹಗರಣ ಕೇಸ್ ಟೈಮ್ ಲೈನ್ ಇಲ್ಲಿದೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ