12 ತಿಂಗಳ ಅವಧಿಯ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪರಿಶಿಷ್ಟ ಜಾತಿಯ-1 ಹಾಗೂ ಪ.ಪಂಗಡದ-1 ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಸೈಫೆಂಡ್ ನೀಡಲಾಗುವುದು.
ಬೆಳಗಾವಿ : 2024-25ನೇ ಸಾಲಿಗೆ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತ್ತಕೋತ್ತರ ಪದವಿ ಹೊಂದಿದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಂದ ಬೆಳಗಾವಿ ಜಿಲ್ಲಾ ವಾರ್ತಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಪರಿಶಿಷ್ಟ ಜಾತಿಯ-1 ಹಾಗೂ ಪ.ಪಂಗಡದ-1 ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಸೈಫೆಂಡ್ ನೀಡಲಾಗುವುದು. ತರಬೇತಿಯು 2025 ರ ಜನವರಿಯಿಂದ ಡಿಸೆಂಬರ್ ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಇದನ್ನೂ ಓದಿ: ರಾತ್ರಿ ಬೆಚ್ಚಗಿನ ನೀರಿನಲ್ಲಿ 1 ಚಮಚ ಅಜವಾನ್ ತಿನ್ನುವುದರಿಂದ ಈ ಕಾಯಿಲೆ ಗುಣಮುಖವಾಗುತ್ತದೆ..!
ಆಸಕ್ತ ಅಭ್ಯರ್ಥಿಗಳು ನ.25 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನ್ಯಾಯಾಲಯ ಆವರಣ, ಬೆಳಗಾವಿ ಇವರನ್ನು (ಮೊಬೈಲ್ ಸಂಖ್ಯೆ 9448589639)ಗೆ ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.