ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
2024-25 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ : 2024-25 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 2.50 ಲಕ್ಷ ಆದಾಯ ಮಿತಿ ಹೊಂದಿರುವ, 40 ವರ್ಷದೊಳಗೆ ಇರುವ ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅವಧಿಯಲ್ಲಿರುವ ಅರ್ಹ ಮತ್ತು ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರು www.twd.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಅಪಲೋಡ್ ಮಾಡಿಕೊಂಡು ಜೂನ್ 31, 2024 ರೊಳಗಾಗಿ ಸಲ್ಲಿಸಬೇಕು.
ಇದನ್ನೂ ಓದಿ:ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000 ಗಳ ಶಿಷ್ಯವೇತನವನ್ನು ಸರಕಾರಿ, ಹಿರಿಯ ವಕೀಲರ ಮಾರ್ಗದರ್ಶನದಂತೆ 2 ವರ್ಷಗಳ ಕಾಲ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ