ಬಳ್ಳಾರಿ:  ಭಾರತ ಸರ್ಕಾರ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದಿಂದ 2022-23 ನೇ ಸಾಲಿಗಾಗಿ ರಾಷ್ಟ್ರೀಯ ಯುವ ಸ್ವಯಂ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ನಗರ ಮತ್ತು ಗ್ರಾಮಾಂತರ ಯುವ ಜನರಿಗಾಗಿ ಕೇಂದ್ರ ಸರ್ಕಾರದ ಯುವ ಪರ ಕಾರ್ಯಕ್ರಮಗಳನ್ನು ಸಂಘಟಿಸುವುದು ಹಾಗೂ ಯುವಕ-ಯುವತಿ, ಮಹಿಳಾ ಮಂಡಳಿಗಳನ್ನು ರಚಿಸುವುದು ಕಾರ್ಯಕರ್ತರ ಕೆಲಸವಾಗಿದೆ.


ಇದನ್ನೂ ಓದಿ: ಕಾರ್ಪೇಂಟರ್ ಅಡ್ಡಗಟ್ಟಿ ಕತ್ತು ಕೊಯ್ದು ಬರ್ಬರ ಹತ್ಯೆ


ಅರ್ಹತೆಗಳು: ವಯಸ್ಸು 29 ವರ್ಷದೊಳಗಿನವರಾಗಿರಬೇಕು. ಆಯಾ ತಾಲೂಕಿನವರು ತಮ್ಮ ತಾಲೂಕಿಗೆ ಮಾತ್ರ ಕೆಲಸ ನಿರ್ವಹಿಸಲು ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.5 ಸಾವಿರ ಗೌರವಧನ (ಪ್ರವಾಸ ಭತ್ಯೆ ಸೇರಿ) ನೀಡಲಾಗುವುದು. ಹುದ್ದೆಯು 1 ವರ್ಷದ ಅವಧಿಗೆ ಮಾತ್ರ ಸೀಮಿತವಾಗಿದ್ದು, ಗ್ರಾಮೀಣ ಪ್ರದೇಶ, ಯುವತಿ, ಯುವಕ, ಮಹಿಳಾ ಮಂಡಳಿ ಸದಸ್ಯರಿಗೆ, ಎನ್‍ಸಿಸಿ, ಎನ್‍ಎಸ್‍ಎಸ್, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್‍ನಲ್ಲಿದ್ದವರಿಗೆ ಹಾಗೂ ಪದವಿದರರಿಗೆ ಆದ್ಯತೆ ನೀಡಲಾಗುವುದು.www.nvks.org ನಲ್ಲಿ ಸಲ್ಲಿಸಬೇಕು. ನಕಲು ಪ್ರತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.


ಇದನ್ನೂ ಓದಿ: ಬಾಡೂಟದ ಬಳಿಕ ದೇವಸ್ಥಾನಕ್ಕೆ ತೆರಳಿದ ಸಿ ಟಿ ರವಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?


ಹೆಚ್ಚಿನ ಮಾಹಿತಿಗಾಗಿ ದೂ.08392-276839 ಗೆ ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪಾತರ್ ಅವರು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.