ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(MRPL)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


COMMERCIAL BREAK
SCROLL TO CONTINUE READING

ಶೈಕ್ಷಣಿಕ ಅರ್ಹತೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ MBA, ಮಾರ್ಕೆಟಿಂಗ್/ಇಂಟರ್​​ನ್ಯಾಷನಲ್ ಟ್ರೇಡ್​ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: ಮೈತ್ರಿಯಿಂದ ಬಿಸಿ ತುಪ್ಪ ನುಂಗುವಂತಾಯ್ತಾ HDK ಸ್ಥಿತಿ..?


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 24ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ: OBC (NCL) ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ


ಅರ್ಜಿ ಶುಲ್ಕ: SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆದರೆ, ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು 118 ರೂ.ವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.


ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹50,000 ರಿಂದ ₹1,60,000 ರೂ. ಸಂಬಳ ನೀಡಲಾಗತ್ತದೆ.


ಆಯ್ಕೆ ಪ್ರಕ್ರಿಯೆ: ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ..?: ಅಭ್ಯರ್ಥಿಗಳು https://advt93.recttindia.in/ ಲಿಂಕ್‌ ಕ್ಲಿಕ್‌ ಮಾಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.   


ಇದನ್ನೂ ಓದಿ: ದೇಶದ ಅತೀ ಉದ್ದದ ಕೇಬಲ್‌ ಸೇತುವೆ ʻಸುದರ್ಶನ ಸೇತುʼ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.