ಬೆಂಗಳೂರು:  ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2023-24ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಆಸಕ್ತರು ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕು, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುವುದು, ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅಥಿತಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ.ಒಳ್ಳೆಯ ಗ್ರಂಥಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಯಲ್ಲಿ ವಿದ್ಯಾರ್ಥಿಗಳ ಭಾರತೀಯ ರಂಗಭೂಮಿ ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈಧ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.


ಇದನ್ನೂ ಓದಿ: Karnataka Cabinet: ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ


ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಶಾಲೆಯ ವೆಬ್ ಸೈಟ್‍ನಲ್ಲಿ www.theatreschoolsanehalli.org ನಲ್ಲಿ ಪ್ರವೇಶ ಅರ್ಜಿಗಳನ್ನು ಡೌನ್‍ಲೋಡ್ ಮಾಡಿ ಜೂನ್ 30 ರ ಒಳಗಾಗಿ ಶ್ರೀ ಶಿವಕುಮಾರ ರಂಗಪ್ರಯೋಗಶಾಲೆ ಹೊಸದುರ್ಗ ತಾಲೂಕು, ಸಾಣೆಹಳ್ಳಿ -577515 ಗೆ ಅರ್ಜಿಗಳನ್ನು ಸಲ್ಲಿಸಬೇಕು.


ಹೆಚ್ಚಿನ ವಿವರಗಳಿಗಾಗಿ ದೂ.ಸಂ. 9448398144- 8861043553 ಮತ್ತು 9482942394 ಗೆ ಸಂಪರ್ಕಿಸಬಹುದು ಎಂದು ಶ್ರೀ ಶಿವಕುಮಾರ ರಂಗಪ್ರಯೋಗಶಾಲೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ