ಧಾರವಾಡ: ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯವೇತನದ ಆಧಾರದ ಮೇಲೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಪಡೆಯುವ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಮಿತಿಯಲ್ಲಿರಬೇಕು. ಕಾನೂನು ಪದವಿ ಪಡೆದ 2 ವರ್ಷದೊಳಗಿನ ಅವಧಿಯಲ್ಲಿ 40 ವರ್ಷದೊಳಗಿನ ಅರ್ಹ ಆಸಕ್ತಿಯುಳ್ಳ ಪರಿಶಿಷ್ಟ ಜಾತಿ ಕಾನೂನು ಪದವೀಧರರು www.sw.kar.nic.in  ವೆಬ್‍ಸೈಟ್ ಮೂಲಕ ಜೂನ್ 30, 2022 ರೊಳಗಾಗಿ ಅರ್ಜಿಗಳನ್ನು ಅಪ್‍ಲೋಡ್ ಮಾಡಬಹುದು.'ಗಂಗಾವತಿ-ದರೋಜಿ ರೈಲ್ವೇ ಮಾರ್ಗದ ಸರ್ವೇ ಕಾರ್ಯ ಶೀಘ್ರ ಪ್ರಾರಂಭ'


ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 10 ಸಾವಿರ ರೂ.ಗಳ ಭತ್ಯೆಯನ್ನು 2 ವರ್ಷ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ.ಕಂಪೌಂಡ, ಧಾರವಾಡ ಇವರ ಕಛೇರಿಗೆ ಭೇಟಿ ನೀಡಬಹುದು ಅಥವಾ ದೂ.ಸಂ: 0836-2447201 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.