ಮಡಿಕೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ‘ಯುವ ಸ್ಪಂದನ’ ಯೋಜನೆ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಪೊನ್ನಂಪೇಟೆಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Bandipura Forest: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪರಿಸರವಾದಿಗಳ ಆಕ್ಷೇಪ 


ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟ ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ನವೆಂಬರ್, 26 ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ.


ಇದನ್ನೂ ಓದಿ: ಜೋಗಿ ನಟಿ ಜೆನಿಫರ್ ಕೊತ್ವಾಲ್ ನೆನಪುಂಟೇನ್ರಿ, ಈಗ ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ ಗೊತ್ತೇ ಚುಕುಬುಕು ರೈಲು ಸುಂದರಿ!!


ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂ.ಸಂ. 08272-220986, ಆನಂದ 9632104204, ಲಕ್ಷ್ಮಿ 7204363367 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ