Job Alert: ಡಿಗ್ರಿ ಪಾಸ್ ಆಗಿದ್ರೆ ಈ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

Bagalkot Zilla Panchayat Recruitment 2023: ಬಾಗಲಕೋಟೆ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯ್ತಿಯ ಅಧಿಕೃತ ಅಧಿಸೂಚನೆಯ ಮೂಲಕ ತಾಂತ್ರಿಕ ಸಹಾಯಕ, ತಾಲೂಕು MIS ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 19ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Written by - Puttaraj K Alur | Last Updated : Oct 5, 2023, 09:02 PM IST
  • ಬಾಗಲಕೋಟೆ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನ
  • 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕು MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇವೆ
  • ಇದೇ ಅ.19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Job Alert: ಡಿಗ್ರಿ ಪಾಸ್ ಆಗಿದ್ರೆ ಈ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ title=
Bagalkot Zilla Panchayat Recruitment 2023

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕು MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  

ಹುದ್ದೆಗಳ ವಿವರ ಈ ರೀತಿ ಇದೆ

ರೇಷ್ಮೆ ಕೃಷಿ ತಾಂತ್ರಿಕ ಸಹಾಯಕ- 1

ತೋಟಗಾರಿಕೆ ತಾಂತ್ರಿಕ ಸಹಾಯಕ- 7

ಅರಣ್ಯ ತಾಂತ್ರಿಕ ಸಹಾಯಕ- 4

ತಾಂತ್ರಿಕ ಸಹಾಯಕ (ಸಿವಿಲ್)- 1

ತಾಲೂಕು MIS ಸಂಯೋಜಕರು- 1

ಇದನ್ನೂ ಓದಿ: ಭೂಮಿ ತಾಯಿ ಹೋರಾಟ ಸಮಿತಿಯಿಂದ ವಿನೂತನ ಪ್ರತಿಭಟನೆ

ವಿದ್ಯಾರ್ಹತೆ

ರೇಷ್ಮೆ ಕೃಷಿ ತಾಂತ್ರಿಕ ಸಹಾಯಕ - ಬಿ.ಎಸ್ಸಿ, ಸಿರಿಕಲ್ಚರ್​​ನಲ್ಲಿ ಎಂ.ಎಸ್ಸಿ

ತೋಟಗಾರಿಕೆ ತಾಂತ್ರಿಕ ಸಹಾಯಕ - ಬಿ.ಎಸ್ಸಿ, ಹಾರ್ಟಿಕಲ್ಚರ್​​ನಲ್ಲಿ ಎಂ.ಎಸ್ಸಿ

ಅರಣ್ಯ ತಾಂತ್ರಿಕ ಸಹಾಯಕ - ಬಿ.ಎಸ್ಸಿ, ಫಾರೆಸ್ಟ್ರಿಯಲ್ಲಿ ಎಂ.ಎಸ್ಸಿ

ತಾಂತ್ರಿಕ ಸಹಾಯಕ (ಸಿವಿಲ್)- ಬಿಇ, ಸಿವಿಲ್ ಎಂಜಿನಿಯರಿಂಗ್​ನಲ್ಲಿ ಎಂ.ಟೆಕ್

ತಾಲೂಕು MIS ಸಂಯೋಜಕರು - ಬಿಸಿಎ, ಬಿಇ, ಪದವಿ, ಕಂಪ್ಯೂಟರ್ ಸೈನ್ಸ್​​ನ್ಲಲಿ ಎಂಸಿಎ

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ವಯೋಮಿತಿ: ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 19ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಬಾಗಲಕೋಟೆ ಉದ್ಯೋಗದ ಸ್ಥಳವಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಮೆರಿಟ್​ ಲಿಸ್ಟ್,​ ಪ್ರಾಕ್ಟಿಕಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೀಗಾಗಿ ಈ ಕೆಳಗೆ ನೀಡಲಾಗಿರುವ ಲಿಂಕ್​ಗಳ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಸಿರಿಕಲ್ಚರ್/ಹಾರ್ಟಿಕಲ್ಚರ್/ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಪ್ಲೈ ಮಾಡಲು https://sevasindhuservices.karnataka.gov.in/error.do ಈ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿರಿ.

ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್) ಹುದ್ದೆಗೆ ಅಪ್ಲೈ ಮಾಡಲು https://sevasindhuservices.karnataka.gov.in/error.do  ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿರಿ.

ತಾಲೂಕು MIS ಕೋಆರ್ಡಿನೇಟರ್ ಹುದ್ದೆಗೆ ಅಪ್ಲೈ ಮಾಡಲು https://sevasindhuservices.karnataka.gov.in/error.do ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Trending News