ನವದೆಹಲಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಒಟ್ಟು 38 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 


COMMERCIAL BREAK
SCROLL TO CONTINUE READING

ಇದೇ ಫೆಬ್ರವರಿ 9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಉದ್ಯೋಗಾಂಕ್ಷಿಗಳು ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಬಂಪರ್ ಅವಕಾಶವಾಗಿದೆ.


ಇದನ್ನೂ ಓದಿ: Daily GK Quiz: ಭಾರತದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಯಾವುದು?


ವಿದ್ಯಾರ್ಹತೆ: ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2024ಕ್ಕೆ ಕನಿಷ್ಠ 25 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ: OBC (NCL) ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ


ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹48,170-₹69,810 ಸಂಬಳವಿರುತ್ತದೆ


ಉದ್ಯೋಗದ ಸ್ಥಳ: ಆಯ್ಕೆಯಾಗುವ ಅಭ್ಯರ್ಥಿಗಳನ್ನು ಭಾರತದಾದ್ಯಂತ ಎಲ್ಲಿ ಬೇಕಾದರೂ ಪೋಸ್ಟಿಂಗ್ ಮಾಡಬಹುದು.


ಅರ್ಜಿ ಶುಲ್ಕ: SC/ST/ಮಹಿಳಾ ಅಭ್ಯರ್ಥಿಗಳಿಗೆ ₹100, ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ ₹600 ಇರುತ್ತದೆ. ಆನ್‌ಲೈನ್ ಮೂಲಕವೇ ಶುಲ್ಕವನ್ನು ಪಾವತಿಸಬೇಕು. 


ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಬ್ಯಾಂಕ್‌ ಆಫ್‌ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: Rahul Gandhi: 'ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ... ಮೋದಿ OBCಯಲ್ಲಿ ಹುಟ್ಟಿಲ್ಲʼ!: ರಾಹುಲ್‌ ಗಾಂಧಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.