Union Bank of India Recruitment 2024: ಸರ್ಕಾರಿ ಸ್ವಾಮ್ಯದ ಯೂನಿಯನ್ ಬ್ಯಾಂಕ್‌ನಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ರಾಜ್ಯ ಸೇರಿದಂತೆ 10 ರಾಜ್ಯಗಳ ಯೂನಿಯನ್ ಬ್ಯಾಂಕ್ ಶಾಖೆಗಳಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.


COMMERCIAL BREAK
SCROLL TO CONTINUE READING

ಒಟ್ಟು 1,500 ಹುದ್ದೆಗಳು ಖಾಲಿ ಇದ್ದು, ಈ ಪೈಕಿ ಕರ್ನಾಟಕ ರಾಜ್ಯಕ್ಕೆ 300 ಹುದ್ದೆಗಳನ್ನು ಮೀಸಲಿಡಲಾಗಿದೆ. ಯಾವುದೇ ವಿಷಯದಲ್ಲಿ ಪದವಿಯ ಜೊತೆ ಕನ್ನಡ ಓದಲು ಬರೆಯಲು ಬರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿ ಒತ್ತು : ಬಜೆಟ್ ನಲ್ಲಿ 3 ಲಕ್ಷ ಕೋಟಿ ಮೀಸಲು


ಶೈಕ್ಷಣಿಕ ಅರ್ಹತೆ: ಯೂನಿಯನ್ ಬ್ಯಾಂಕಿನ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ಒಂದು ವಿಷಯದಲ್ಲಿ ಕನಿಷ್ಟ ಪದವಿ ಪಡೆದಿರಬೇಕು. 


ವಯೋಮಿತಿ: ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷದ ಒಳಗೆ ಇರಬೇಕು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.


ವೇತನ ಶ್ರೇಣಿ: ಯೂನಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,480 ರೂ.ನಿಂದ 85,920 ರೂ.ವರೆಗೆ ವೇತನವಿರುತ್ತದೆ. ಇದರ ಜೊತೆಗೆ ಮನೆ ಬಾಡಿಗೆ ಭತ್ಯೆ, ವೈದ್ಯಕೀಯ ವೆಚ್ಚ ಮರುಪಾವತಿ, ವಿಶೇಷ ಭತ್ಯೆ, ತುಟ್ಟಿ ಭತ್ಯೆ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ. 


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ!ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ ದೀಪಾವಳಿ ಬೋನಸ್ ಘೋಷಿಸಿದ ರಾಜ್ಯ ಸರ್ಕಾರ !


ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳು ಹಾಗೂ ಇತರೆ ವರ್ಗದ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. 


ಅರ್ಜಿ ಸಲ್ಲಿಸಲು 2024ರ ನವೆಂಬರ್ 13 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.