BHEL Recruitment: ತಿಂಗಳಿಗೆ ₹95 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ

BHEL Recruitment 2024: BHELನಲ್ಲಿ ಖಾಲಿಯಿರುವ GDMO ಮತ್ತು ಸ್ಪೆಷಲಿಸ್ಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://bhel.com/ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  

Written by - Puttaraj K Alur | Last Updated : May 12, 2024, 08:08 PM IST
  • ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿ
  • BHELನ GDMO ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
  • ಆಸಕ್ತ & ಅರ್ಹ ಅಭ್ಯರ್ಥಿಗಳು ವಾಕ್-ಇನ್‌ ಸಂದರ್ಶನಕ್ಕೆ ಹಾಜರಾಗಬಹುದು
BHEL Recruitment: ತಿಂಗಳಿಗೆ ₹95 ಸಾವಿರ ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ title=
BHEL Recruitment 2024

BHEL Recruitment 2024: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ನಲ್ಲಿ (BHEL) ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. BHEL ಸರ್ಕಾರಿ ಉದ್ಯೋಗ ಪಡೆಯಬಯಸುವ ಯುವಕರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಯ ವಿವಿರ: BHELನಲ್ಲಿ ಖಾಲಿಯಿರುವ GDMO ಮತ್ತು ಸ್ಪೆಷಲಿಸ್ಟ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://bhel.com/ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  

ಇದನ್ನೂ ಓದಿ: Ration Card: ರೇಷನ್ ಕಾರ್ಡ್‌ದಾರರಿಗೆ ಸಿಗಲಿದೆ ಕಾಂಡೋಮ್ ಜೊತೆ ಈ 46 ವಸ್ತುಗಳು!

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ವಿದ್ಯಾರ್ಹತೆ ಹೊಂದಿರಬೇಕು. GDMO ಹುದ್ದೆಗೆ ಭಾರತೀಯ ವೈದ್ಯಕೀಯ ಮಂಡಳಿಯಿಂದ ಗುರುತಿಸಲ್ಪಟ್ಟ ಕಾಲೇಜಿನಿಂದ ಕನಿಷ್ಠ ಎಂಬಿಬಿಎಸ್ ಪದವಿ ಮತ್ತು ಭಾರತೀಯ ವೈದ್ಯಕೀಯ ಮಂಡಳಿ ಅಥವಾ ರಾಜ್ಯ ವೈದ್ಯಕೀಯ ಮಂಡಳಿಯಲ್ಲಿ ಅಭ್ಯರ್ಥಿಯು ತನ್ನ ಹೆಸರನ್ನು ನೋಂದಾಯಿಸಿಕೊಂಡಿರಬೇಕು. ಸ್ಪೆಷಲಿಸ್ಟ್‌ ಹುದ್ದೆಗೆ ಸ್ನಾತಕೋತ್ತರ ಪದವಿಯೊಂದಿಗೆ MBBS ಪದವಿ ಹಾಗೂ ಕೌನ್ಸಿಲ್ ಆಫ್ ಇಂಡಿಯಾ ಅಥವಾ ಸ್ಟೇಟ್ ಮೆಡಿಕಲ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿರಬೇಕು. 

ವಯೋಮಿತಿ: ಈ ನೇಮಕಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷಗಳಾಗಿರಬೇಕು. OBC ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ಇರುತ್ತದೆ.

ವೇತನ: CMP (GDMO) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 95,000 ರೂ. ವೇತನ ನೀಡಲಾಗುತ್ತದೆ. ಅದೇ ರೀತಿ CMP (ಸ್ಪೆಷಲಿಸ್ಟ್) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 1,10,400 ರೂ. ವೇತನ ನೀಡಲಾಗುತ್ತದೆ.

ಇದನ್ನೂ ಓದಿ: 75 ವರ್ಷ ವಯಸ್ಸಿನ ನಂತರ ಮೋದಿ ಪ್ರಧಾನಿಯಾಗಿ ಮುಂದುವರೆಯುತ್ತಾರಾ? ಅಮಿತ್ ಶಾ ಹೇಳಿದ್ದೇನು?

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ವಾಕ್-ಇನ್‌ ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತರಬೇಕು ಮತ್ತು ದಾಖಲೆಗಳ ಸ್ವಯಂ-ದೃಢೀಕರಿಸಿದ ಫೋಟೊಕಾಪಿಗಳನ್ನು ಸಹ ತರಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News