BMRCL Recruitment 2024: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿಯಿರುವ 58 ಅಸಿಸ್ಟಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನವಾಗಿರುತ್ತದೆ.
ಹುದ್ದೆಗಳ ವಿವರ & ಅರ್ಹತೆ: ಅಸಿಸ್ಟಂಟ್ ಸೆಕ್ಯೂರಿಟಿ ಆಫೀಸರ್ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ/ಸುಬೇದಾರ್ ಮೇಜರ್/ಸುಬೇದಾರ್/ಮಾಸ್ಟರ್ ಚೀಫ್ ಪೆಟ್ಟಿ, ಆಫೀಸರ್/ಮಾಸ್ಟರ್ ವಾರಂಟ್ ಆಫೀಸರ್/ವಾರಂಟ್ ಆಫೀಸರ್ ಅಥವಾ ತತ್ಸಮಾನ, ರಕ್ಷಣಾ ಸೇವೆಯಲ್ಲಿದ್ದವರು, ಇನ್ಸ್‌ಪೆಕ್ಟರ್/ಸಬ್ ಇನ್ಸ್‌ಪೆಕ್ಟರ್/ಎಎಸ್‌ಐ ಅಥವಾ ತತ್ಸಮಾನ ಶ್ರೇಣಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್
ವಯೋಮಿತಿ: ಗರಿಷ್ಠ ವಯೋಮಿತಿ 62 ವರ್ಷ. ಇದು ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, 60 ವರ್ಷಕ್ಕಿಂತ ಕೆಳಗಿರುವವರನ್ನು 3 ವರ್ಷಕ್ಕೆ ಮತ್ತು 60 ವರ್ಷಕ್ಕಿಂತ ಮೇಲಿರುವವರನ್ನು 1 ವರ್ಷಕ್ಕೆ ನೇಮಕ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ನಿರ್ವಹಿಸುವ ರೀತಿಯನ್ನು ನೋಡಿಕೊಂಡು ಗುತ್ತಿಗೆ ಮುಂದುವರಿಸುವ ಬಗ್ಗೆ ನಿರ್ಧರಿಸಲಾಗುತ್ತದೆ.
ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ: ಆಯ್ಕೆಯಾದ 60 ವರ್ಷದೊಳಗಿನವರಿಗೆ 32,950 ರೂ. ಮತ್ತು 60 ವರ್ಷ ದಾಟಿದವರಿಗೆ 30,000 ರೂ. ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?: ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು projectrecruit.bmrc.co.inಗೆ ಭೇಟಿ ನೀಡಿ, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು: General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bengaluru - 560027.
ಇದನ್ನೂ ಓದಿ: ವೈದ್ಯರ ಮುಷ್ಕರ: ಗಡಿಜಿಲ್ಲೆ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ, ಚಿಕಿತ್ಸೆ ಸಿಗದೇ ವಾಪಾಸ್!!
ವಿಶೇಷ ಸೂಚನೆ: ನಿಮ್ಮ ಅಪ್ಲಿಕೇಷನ್ ಸ್ಪೀಡ್ ಪೋಸ್ಟ್/ಕೊರಿಯರ್ ಮೂಲಕ ಕಳುಹಿಸಬೇಕು. ಅರ್ಜಿ ಲಕೋಟೆಯ ಮೇಲ್ಭಾಗದಲ್ಲಿ "APPLICATION FOR THE POST OF ASSISTANT SECURITY OFFICER" ಎಂದು ನಮೂದಿಸುವುದನ್ನು ಮರೆಯಬಾರದು. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ english.bmrc.co.inಗೆ ಭೇಟಿ ನೀಡಿ ಅಥವಾ ಇಮೇಲ್ ವಿಳಾಸ helpdesk@bmrc.co.inಗೆ ಸಂಪರ್ಕಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ