BSF Recruitment 2023: ಪದವೀಧರರಿಗೆ ಗುಡ್ ನ್ಯೂಸ್, ಗಡಿ ಭದ್ರತಾ ಪಡೆ ನೇಮಕಾತಿ
BSF Recruitment 2023: BSFನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ನವದೆಹಲಿ: ಭಾರತೀಯ ಗಡಿ ಭದ್ರತಾ ಪಡೆ(BSF)ಯ ಇನ್ಸ್‌ಪೆಕ್ಟರ್ (ಲೈಬ್ರರಿಯನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಮೂಲಕ ಖಾಲಿಯಿರುವ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSFನ ಅಧಿಕೃತ ವೆಬ್‌ಸೈಟ್ bsf.nic.inಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ: ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF)ನಲ್ಲಿ ಖಾಲಿ ಇರುವ 2 ಇನ್‌ಸ್ಪೆಕ್ಟರ್ (ಲೈಬ್ರೇರಿಯನ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ: BSFನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ಈ ದೇಶದಲ್ಲಿ ಫೋಟೋ ತೆಗೆಯುವುದು ಮಹಾ ಅಪರಾಧ!
ವಯೋಮಿತಿ: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ: 3 ವರ್ಷಗಳಿಗಿಂತ ಕಡಿಮೆಯಿಲ್ಲದ ನಿಯಮಿತ ಮತ್ತು ನಿರಂತರ ಸೇವೆ ಸಲ್ಲಿಸಿದ ಕೇಂದ್ರ ಸರ್ಕಾರಿ ನೌಕರರಿಗೆ (ಅನ್‌ರಿಸರ್ವ್ಡ್) 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ: ಮಹಿಳೆಯರು/SC/ST ಮತ್ತು BSF ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ಇತರ ಎಲ್ಲಾ ಅಭ್ಯರ್ಥಿಗಳಿಗೆ 200 ರೂ. ಪರೀಕ್ಷಾ ಶುಲ್ಕವಿರುತ್ತದೆ.
ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 44,900 ರೂ.ನಿಂದ 1,42,400 ರೂ. ನೀಡಲಾಗುತ್ತದೆ.
ಪ್ರಮುಖ ದಿನಾಂಕ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-07-2023 ಆಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತು ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್ bsf.nic.inಗೆ ಭೇಟಿ ನೀಡಿ.
ಇದನ್ನೂ ಓದಿ: ನಿಮ್ಮ ಆಧಾರ್ - ಪ್ಯಾನ್ ಲಿಂಕ್ ಆಗಿದ್ಯಾ..? ಈ ವಿಧಾನ ಬಳಸಿ ಇಂದೇ ಖಚಿತ ಪಡಿಸಿಕೊಳ್ಳಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.