ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

Written by - Manjunath N | Last Updated : Jul 24, 2024, 10:29 PM IST
  • ಈಗಾಗಲೇ ಕ.ಸಾ.ಅ.ಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು,
  • ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಮುಂದಿನ ಮೂರು ವರ್ಷದವರೆಗೆ ಪರಿಗಣಿಸುವುದಿಲ್ಲ.
  • ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.
 ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ title=

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2023ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

2023ನೇ ಅವಧಿಯಲ್ಲಿ ಪ್ರಕಟವಾದ ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ / ಅಂಕಣಬರಹ, ಅನುವಾದ-1 ಮತ್ತು 2, ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷಿಗೆ ಅನುವಾದ, ದಾಸ ಸಾಹಿತ್ಯ, ಸಂಕೀರ್ಣ ಕೃತಿಗಳ ತಲಾ 4 ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ರಿಜಿಸ್ಟರ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್ 31 ರೊಳಗಾಗಿ ಸಲ್ಲಿಸುವುದು. ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತ್ಯದ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.

ಇದನ್ನೂ ಓದಿ: ಮನೆಯ ಮುಂದೆ ಈ ಗಿಡಗಳನ್ನು ನೆಟ್ಟರೆ ಹಾವು ಸೇರಿದಂತೆ ಯಾವುದೇ ಹುಳುಹುಪ್ಪಡಿ ಅತ್ತಕಡೆ ಸುಳಿಯುವುದಿಲ್ಲ!

ಮರುಮುದ್ರಣವಾದ ಪುಸ್ತಕಗಳು, ಪಿಹೆಚ್.ಡಿ. ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳು, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕೃತಿಗಳು, ಈಗಾಗಲೇ ಕ.ಸಾ.ಅ.ಯಿಂದ ಒಟ್ಟಾರೆ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳು, ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಮುಂದಿನ ಮೂರು ವರ್ಷದವರೆಗೆ ಪರಿಗಣಿಸುವುದಿಲ್ಲ. ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ದೂ.ಸಂ.: 080-22211730/22106460 ಹಾಗೂ ವೆಬ್‌ಸೈಟ್ www.sahithyaacademy.karnataka.gov.in ಗಳನ್ನು ಸಂಪರ್ಕಿಸುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News