ಚುನಾವಣೆ ನೀತಿ ಸಂಹಿತೆ ಜಾರಿಯಾದ ಬಳಿಕವೋ ವೋಟರ್ ಐಡಿ ಮಾಡಿಸಬಹುದೇ?
Voter ID: ನಿನ್ನೆಯಷ್ಟೇ ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಿದೆ. ಐದು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಾಗಿ ಚುನಾವಣಾ ಆಯೋಗ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಈ ಪಟ್ಟಿಯಲ್ಲಿ ಹೆಸರಿಲ್ಲದವರು ಈಗ ಅವರ ಹೆಸರನ್ನು ಸೇರಿಸಬಹುದೇ?
Voter ID: ಪ್ರಜಾಪ್ರಭುತ್ವದ ಅತಿ ದೊಡ್ಡ ದೇಶ ನಮ್ಮದು. ದೇಶದಲ್ಲಿ ನ್ಯಾಯಯುತ ಚುನಾವಣೆಯನ್ನು ನಡೆಸಲು ಕೇಂದ್ರ ಚುನಾವಣಾ ಆಯೋಗವು ಹಲವು ನಿಯಮಗಳು ಮತ್ತು ಷರತ್ತುಗಳನ್ನು ರೂಪಿಸಿದೆ. ಇವುಗಳನ್ನು ಚುನಾವಣಾ ನೀತಿ ಸಂಹಿತೆ ಎಂದು ಕರೆಯಲಾಗುತ್ತದೆ. ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಯಾದ ಬಳಿಕ ಕೆಲವು ಚಟುವಟಿಕೆಗಳನ್ನು ನಿಷೇಧಿಸಲಾಗುತ್ತದೆ.
ಇದೀಗ, ನಿನ್ನೆಯಷ್ಟೇ ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಈ ವರ್ಷ ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ, ರಾಜಸ್ಥಾನ ಮತ್ತು ಮಿಜೋರಾಂ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಪಂಚ ರಾಜ್ಯಗಳ ಚುನಾವಣೆಗಾಗಿ, ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿಯನು ಸಹ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದವರು ತಮ್ಮ ಹೆಸರನ್ನು ಸೇರಿಸಬಹುದೇ? ಈ ಬಗ್ಗೆ ಇಲ್ಲಿದೆ ಮಾಹಿತಿ.
ಕೇಂದ್ರ ಚುನಾವಣಾ ಆಯೋಗದ ಪ್ರಕಾರ, ಇನ್ನೂ ಸಹ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸದೆ ಇರುವವರು ಆನ್‌ಲೈನ್ ಅಥವಾ ಆಫ್‌ಲೈನ್ ಮೋಡ್ ಮೂಲಕ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಬಹುದು. ವಿಶೇಷವೆಂದರೆ, ಚುನಾವಣಾ ನೀತಿ ಸಂಹಿತೆ ಜಾರಿಯಾದ ಹತ್ತು ದಿನಗಳವರೆಗೆ ಮತದಾರರಿಗೆ ವೋಟರ್ ಐಡಿಗೆ ತಮ್ಮ ಹೆಸರನ್ನು ನೋಂದಾಯಿಸಲು ಅವಕಾಶವಿರುತ್ತದೆ.
ಇದನ್ನೂ ಓದಿ- ಶೋಪಿಯಾನ್ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಆನ್‌ಲೈನ್ ಮೋಡ್ ನಲ್ಲಿ ವೋಟರ್ ಐಡಿಗೆ ನಿಮ್ಮ ಹೆಸರನ್ನು ನೋಂದಾಯಿಸಲು ಈ ಹಂತಗಳನ್ನು ಅನುಸರಿಸಿ:
* ಮೊದಲಿಗೆ eci.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
* ಇಲ್ಲಿ ಪರದೆಯ ಮೇಲೆ ಕಾಣುವ 'ಆನ್‌ಲೈನ್ ಮತದಾರರ ನೋಂದಣಿ' ಎಂಬ ಆಯ್ಕೆಯನ್ನು ಆರಿಸಿ.
* ಮತದಾರರ ಪಟ್ಟಿಗೆ ನಿಮ್ಮ ಹೆಸರನ್ನು ನೋಂದಾಯಿಸಲು ಬಳಕೆದಾರರ ಐಡಿ ಮತ್ತು ಪಾಸ್‌ವರ್ಡ್ ಅನ್ನು ರಚಿಸಿ.
* ಈ ಸಮಯದಲ್ಲಿ ನಿಗದಿತ ಜಾಗದಲ್ಲಿ ನಿಮ್ಮ ಪಾಸ್‌ಪೋರ್ಟ್ ಅಳತೆಯ ಫೋಟೋವನ್ನು ಅಪ್ಲೋಡ್ ಮಾಡಿ.
* ಅಗತ್ಯವಿರುವೆಡೆ ವಿಳಾಸ ಪುರಾವೆ ಸೇರಿದಂತೆ ಹೆಚ್ಚುವರಿ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿರಿ.
ಆನ್‌ಲೈನ್‌ನಲ್ಲಿ ಮತದಾನ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಲು ಮೊದಲು ಮತದಾರರ ಸಹಾಯವಾಣಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ. ಈ ಲಾಗಿನ್ ನಂತರ. ನೀವು EPIC ಸಂಖ್ಯೆಯ ಮೂಲಕ ಮತದಾನ ಪಟ್ಟಿಯ ಸ್ಥಿತಿಯನ್ನು ಪರಿಶೀಲಿಸಬಹುದು.
ಒಂದೊಮ್ಮೆ ನೀವು ಆನ್‌ಲೈನ್ ನಲ್ಲಿ ದಾಖಲೆಗಳನ್ನು ಸಲ್ಲಿಸಲು ಸಾಧ್ಯವಾಗದಿದ್ದರೆ ದಾಖಲೆಗಳನ್ನು ಸಂಗ್ರಹಿಸಲು ಬೂತ್ ಮಟ್ಟದ ಅಧಿಕಾರಿಗಳು ನಿಮ್ಮ ನಿವಾಸಕ್ಕೆ ಭೇಟಿ ನೀಡುವಂತೆ ನೀವು ವಿನಂತಿಸಲು ಕೂಡ ಅವಕಾಶವಿದೆ.
ಇದನ್ನೂ ಓದಿ- ಈ ಪ್ರದೇಶಗಳಲ್ಲಿ 48 ಗಂಟೆಗಳಲ್ಲಿ ಬಿಡದೆ ಸುರಿಯಲಿದೆ ಮಳೆ ! ಹವಾಮಾನ ಇಲಾಖೆ ಎಚ್ಚರಿಕೆ
ಮತದಾರರ ಪಟ್ಟಿಗೆ ನಿಮ್ಮ ಹೆಸರು ಸೇರಿಸಲು ಆಫ್‌ಲೈನ್ ಅರ್ಜಿ ಪ್ರಕ್ರಿಯೆ:
ಮತದಾರರ ಪಟ್ಟಿಗೆ ನಿಮ್ಮ ಹೆಸರು ನೋಂದಾಯಿಸಲು ನೀವು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸಿದರೆ ಮೊದಲಿಗೆ ಚುನಾವಣಾ ಆಯೋಗದ ವೆಬ್‌ಸೈಟ್‌ನಿಂದ ನೋಂದಣಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಇಲ್ಲವೇ, ನೀವು ಈ ಅರ್ಜಿಯನ್ನು ಇಆರ್‌ಒ ಕಚೇರಿಯಿಂದಲೂ ಸಂಗ್ರಹಿಸಬಹುದು. ಬಳಿಕ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ವಿನಂತಿಸಿದ ದಾಖಲೆಗಳ ನಕಲು ಪ್ರತಿಗಳನ್ನು ಅದರೊಂದಿಗೆ ಲಗತ್ತಿಸಿ. ಎಲ್ಲವನ್ನೂ ಒಮ್ಮೆ ಕೂಲಂಕುಷವಾಗಿ ಪರಿಶೀಲಿಸಿ ಬಳಿಯಕ ಈ ಅರ್ಜಿಯನ್ನು ನಿಮ್ಮ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿ.
ನೆನಪಿಡಿ: ಚುನಾವಣಾ ನೀತಿ ಸಂಹಿತೆ ಜಾರಿಯಾದ ಹತ್ತು ದಿನಗಳವರೆಗೆ ಮಾತ್ರವೇ ಮತದಾರರ ಪಟ್ಟಿಗೆ ನಿಮ್ಮ ಹೆಸರು ನೋಂದಾಯಿಸಲು ಅವಕಾಶವಿರುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.