Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Canara Bank recruitment 2024: ಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ​

Written by - Puttaraj K Alur | Last Updated : Jun 21, 2024, 11:22 PM IST
  • ಕೆನರಾ ಬ್ಯಾಂಕ್‌ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ
  • ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು
Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ title=
Canara Bank recruitment 2024

Canara Bank recruitment 2024: ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕೌಂಟ್ಸ್ ಮತ್ತು ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೆನರಾ ಬ್ಯಾಂಕಿನ ಲೆಕ್ಕಪತ್ರ ಮತ್ತು ಆಡಳಿತ ಪ್ರಕ್ರಿಯೆಯನ್ನು ನೋಡಿಕೊಳ್ಳಬೇಕು. 

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 28 ವರ್ಷ, SC/ST ಅಭ್ಯರ್ಥಿಗಳಿಗೆ 25 ವರ್ಷ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. 

ವಿದ್ಯಾರ್ಹತೆ: ಅಭ್ಯರ್ಥಿಗಳು B.Com ಪದವಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಅಕೌಂಟಿಂಗ್ ಸಾಫ್ಟ್‌ವೇರ್ ಜ್ಞಾನದ ಜೊತೆಗೆ ಖಾತೆಗಳು ಮತ್ತು ಸಾಮಾನ್ಯ ಆಡಳಿತ ನಿರ್ವಹಿಸುವಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. 

ಇದನ್ನೂ ಓದಿ: ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ 6 ಲಕ್ಷ ರೂ,ಗೆ ಮಾರಾಟ-ವರದಿ

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ವೇತ ನೀಡಲಾಗುತ್ತದೆ. ಹೆಚ್ಚುವರಿಯಾಗಿ ಸವಲತ್ತುಗಳು ಮತ್ತು ಇತರ ಪ್ರಯೋಜನಗಳು ದೊರೆಯಲಿವೆ.   

ಅರ್ಜಿ ಸಲ್ಲಿಸುವುದು ಹೇಗೆ?

1) ಕೆನರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://canarabank.com/pages/Recruitment ಭೇಟಿ ನೀಡಿ ಮತ್ತು ನೇಮಕಾತಿ ವಿಭಾಗದಡಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ
2) ಸರಿಯಾದ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ   
3) ನಿಮ್ಮ ಫೋಟೋ ಮತ್ತು ಸಹಿ ಸೇರಿದಂತೆ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಅನುಭವದ ಪುರಾವೆ ಸೇರಿದಂತೆ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ
4) SC/ST ಅಭ್ಯರ್ಥಿಗಳಿಗೆ 300 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ಪಾವತಿಸಿ
5) ʼCANBANK VENTURE CAPITAL FUND LIMITEDʼ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ ತೆಗೆದುಕೊಳ್ಳಿರಿ
6) ಭರ್ತಿ ಮಾಡಿದ ಫಾರ್ಮ್ ಮತ್ತು ದಾಖಲೆಗಳನ್ನು CANBANK VENTURE CAPITAL FUND LIMITED (CVCFL) ಬೆಂಗಳೂರು - 560004 ಈ ವಿಳಾಸಕ್ಕೆ ಕಳುಹಿಸಬೇಕು.

ಅಭ್ಯರ್ಥಿಗಳು 12 ತಿಂಗಳ ಪ್ರೊಬೇಷನರಿ ಅವಧಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಮುಖಾಮುಖಿ ಸಂದರ್ಶನದ ಮೂಲಕ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ.

ಇದನ್ನೂ ಓದಿ: ವಿಶ್ವದ 3ನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿ ಭಾರತ...!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News