Career in Horticulture: ತೋಟಗಾರಿಕೆ ಇಲಾಖೆ: ಈ ನಾಲ್ಕು ಯೋಜನೆಗಳಿಗಾಗಿ ಸಹಾಯಧನ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ 

Career in Horticulture: ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

Written by - Manjunath N | Last Updated : Apr 15, 2024, 06:36 PM IST
  • ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು,
  • ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
Career in Horticulture: ತೋಟಗಾರಿಕೆ ಇಲಾಖೆ: ಈ ನಾಲ್ಕು ಯೋಜನೆಗಳಿಗಾಗಿ ಸಹಾಯಧನ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ  title=

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.

ವಿವಿಧ ಯೋಜನೆಗಳು:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:

ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:

ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್‍ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಇದನ್ನೂ ಓದಿ: Monkhood: ಸನ್ಯಾಸಿ ಜೀವನ ನಡೆಸಲು 200 ಕೋಟಿ ರೂ ಮೌಲ್ಯದ ಸಂಪತ್ತು ದಾನ ಮಾಡಿದ ದಂಪತಿಗಳು..!

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:

ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.

ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Daily GK Quiz: ಯಾವ ಅಂಗವು ಮಾನವ ದೇಹದಲ್ಲಿ ರಕ್ತ ಶುದ್ಧೀಕರಣವನ್ನು ಮಾಡುತ್ತದೆ?

ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News