ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಛಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವಿಧರರು ಅರ್ಹರಾಗಿದ್ದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.


ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ.


ಇದನ್ನೂ ಓದಿ: ಬಣ್ಣ ರಹಿತ ಮಣ್ಣಿನ ಮೂರ್ತಿಗಳನ್ನು ಪೂಜಿಸಲು ಈಶ್ವರ ಖಂಡ್ರೆ ಮನವಿ


ಸೂಚನೆ:


ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜ್ಯೆನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಿರಬಾರದು.ಅಭ್ಯರ್ಥಿಗಳ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸರಬೇಕು.ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸ್ ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ದೂ.08392-200215, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.