Career Updates: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯಲ್ಲಿ 04 ಹಳೇಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯಲ್ಲಿ 04 ಹಳೇಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮ ಪಂಚಾಯತಿ, ಕುಷ್ಟಗಿ ತಾಲೂಕಿನ ಮೇಣೆದಾಳ ಗ್ರಾ.ಪಂ.ಗಂಗಾವತಿ ತಾಲೂಕಿನ ಆಗೋಲಿ ಗ್ರಾ.ಪಂ ಹಾಗೂ ಕನಕಗಿರಿ ತಾಲೂಕಿನ ಚಿಕ್ಕ ಡಂಕನಕಲ್ ಗ್ರಾ.ಪಂ.ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಲಿ ಇದ್ದು, ತಾತ್ಕಾಲಿಕವಾಗಿ ಮಾಸಿಕ ರೂ.9000 ಗಳ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಖಾಲಿ ಸ್ಥಳಗಳ ವ್ಯಾಪ್ತಿಗಳಿಗೊಳಪಟ್ಟ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದ ಅರ್ಹ ವಿಕಲಚೇತನರು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕೆ ಲೋಕಸಭಾದಿಂದ ಕಾಂಗ್ರೆಸ್‌ನ ಅಧೀರ್ ಚೌಧರಿ ಅಮಾನತು
ಅರ್ಜಿ ಸಲ್ಲಿಸಲು 18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಅಂಗವಿಕಲರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ/ಅನುತ್ತೀರ್ಣ ಹೊಂದಿರಬೇಕು. ಜೊತೆಗೆ ವಿಶೇಷ ಶಿಕ್ಷಣ, ಆರ್.ಸಿ.ಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸನ್ಹೆ ಭಾಷೆ ತರಬೇತಿ, ಧೈಹಿಕ ವ್ಯಾಯಾಮ ತರಬೇತಿ, ವಿಶೇಷ ಜ್ಞಾನಗಳನ್ನು ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು. ಅಂಗವಿಕಲರ ಯು.ಡಿ.ಐ.ಡಿ ವಿಶೇಷ್ಠ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿದವರಾಗಿರಬೇಕು. ಅಭ್ಯರ್ಥಿಯು ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ವಿಕಲಚೇತನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಅನುಭವವಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಬೇಕು. ಮಹಿಳಾ ವಿಕಲಚೇತನರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಇದನ್ನೂ ಓದಿ: ಲೋಕಸಭೆ ಕಲಾಪದಲ್ಲಿ ಮುಂದುವರೆದ ಗದ್ದಲ ಗಲಾಟೆ
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಸೆಪ್ಟಂಬರ್ 8ರ ಒಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟ್ ರಸ್ತೆ ಕೊಪ್ಪಳ ರವರಿಗೆ ಕಚೇರಿ ಅವಧಿಯಲ್ಲಿ ತಹಶೀಲ್ದಾರರಿಂದ ಪಡೆದ ಜಾತಿ, ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹುದ್ದೆಯು ಸಂಪೂರ್ಣವಾಗಿ ಗೌರವಧನದ ಆಧಾರದ ಮೇಲೆ ಹಾಗೂ ತಾತ್ಕಾಲಿಕ ಹುದ್ದೆಯಾಗಿರುತ್ತದೆ. ನಿಗದಿಪಡಿಸಿದ ದಿನಾಂಕ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.