Career Updates: ಸ್ವಕೌಶಲ್ಯದಿಂದ ಸ್ವಾವಲಂಭಿಗಳಾಗಲು ಇಲ್ಲಿದೆ ನಿಮಗೊಂದು ಸುವರ್ಣಾವಕಾಶ...!

Career Updates: ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಬಗ್ಗೆ ತರಬೇತಿ, ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ, ಗಂಗಾವತಿಯಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೆಂ ಯನ್ಸ್ಸ್ ಬಗ್ಗೆ ತರಬೇತಿ ಹಾಗೂ ಕುಕನೂರಿನಲ್ಲಿ ಮೋಬೈಲ್ ಫೋನ್ಸ್ ರಿಪರ‍್ಸ್ & ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.

Written by - Manjunath N | Last Updated : Mar 17, 2024, 10:59 AM IST
  • ಕೊಪ್ಪಳದಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಬಗ್ಗೆ ತರಬೇತಿ,
  • ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ,
  • ಗಂಗಾವತಿಯಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೆಂ ಯನ್ಸ್ಸ್ ಬಗ್ಗೆ ತರಬೇತಿ
Career Updates: ಸ್ವಕೌಶಲ್ಯದಿಂದ ಸ್ವಾವಲಂಭಿಗಳಾಗಲು ಇಲ್ಲಿದೆ ನಿಮಗೊಂದು ಸುವರ್ಣಾವಕಾಶ...! title=

ಕೊಪ್ಪಳ:  ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಕೊಪ್ಪಳದಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿ, ಕುಷ್ಟಗಿಯಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಬಗ್ಗೆ ತರಬೇತಿ, ಯಲಬುರ್ಗಾದಲ್ಲಿ ಫ್ಯಾಷನ್ ಡಿಸೈನಿಂಗ್ ಬಗ್ಗೆ ತರಬೇತಿ, ಗಂಗಾವತಿಯಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೆಂ ಯನ್ಸ್ಸ್ ಬಗ್ಗೆ ತರಬೇತಿ ಹಾಗೂ ಕುಕನೂರಿನಲ್ಲಿ ಮೋಬೈಲ್ ಫೋನ್ಸ್ ರಿಪರ‍್ಸ್ & ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಾರ್ಯಕ್ರಮದಲ್ಲಿ ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ಧಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು ಮತ್ತು ಸಂಬAಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ, ಮಾಹಿತಿ ನೀಡಲಾಗುವುದು.

ಇದನ್ನೂ ಓದಿ: Lokasabha elections 2024: ಕಾಂಗ್ರೆಸ್ ಪಕ್ಷ 20 ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವ 18 ರಿಂದ 40 ವರ್ಷದೊಳಗಿನ, ಕನಿಷ್ಠ ಎಸ್.ಎಸ್.ಎಲ್.ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ನಗರ ಸಭೆ ಎದುರು, ಕೊಪ್ಪಳ–583231, ಇಲ್ಲಿಗೆ ಮಾರ್ಚ್ 28 ರೊಳಗಾಗಿ ಭೇಟಿ ನೀಡಿ ಅಥವಾ ಮೊಬೈಲ್ ಸಂಖ್ಯೆ: 8867748956, 9108972833 & 9986332736 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದಾಗಿದೆ. 30 ಅಭ್ಯರ್ಥಿಗಳ ತಂಡದಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಶೇ.35 ರಷ್ಟು ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.15 ರಷ್ಟು ಅದ್ಯಯೆ ನೀಡಲಾಗುವದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News