CBSE 10ನೇ ಮತ್ತು 12ನೆ ತರಗತಿಗಳ ವಿದ್ಯಾರ್ಥಿಗಳಿಗೊಂದು ಮಹತ್ವದ ಮಾಹಿತಿ!
CBSE Board Exma - ಮುಂದಿನ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಒಮ್ಮೆ ಮಾತ್ರ ನಡೆಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ.
CBSE Board Exam Update: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಮುಂದಿನ ಶೈಕ್ಷಣಿಕ ಅವಧಿಯಿಂದ 10 ಮತ್ತು 12ನೇ ತರಗತಿಗಳಿಗೆ ಒಂದೇ ಮಾದರಿಯ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ ಎನ್ನಲಾಗಿದೆ. ಹೀಗಾಗಿ ಮುಂದಿನ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆಗಳು ಒಮ್ಮೆ ಮಾತ್ರ ನಡೆಯಲಿವೆ ಎಂದು ಹೇಳಲಾಗಿದೆ. ಈ ವರ್ಷ, ದೇಶದಲ್ಲಿ ಕರೋನಾ ವೈರಸ್ ಸೋಂಕಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೋರ್ಡ್ ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಸೋಂಕಿನ ಹಿನ್ನೆಲೆ ಒಂದು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳ ಅಂಕಗಳನ್ನು ಎರಡನೇ ಪರೀಕ್ಷೆಯ ಆಧಾರದ ಮೇಲೆ ಲೆಕ್ಕಹಾಕಲಾಗುವುದು ಎಂದು ಈಗಾಗಲೇ ಮಂಡಳಿ ಸ್ಪಷ್ಟಪಡಿಸಿದೆ. ಆದರೆ ಈ ನೀತಿಯನ್ನು ಇದೀಗ CBSE ರದ್ದುಗೊಳಿಸಲಿದೆ ಎನ್ನಲಾಗಿದೆ.
ಟರ್ಮ್ 1 ಬೋರ್ಡ್ ಪರೀಕ್ಷೆಯನ್ನು ನವೆಂಬರ್-ಡಿಸೆಂಬರ್ 2021 ರಲ್ಲಿ ನಡೆಸಲಾಗಿದ್ದು, ಟರ್ಮ್ 2 ಪರೀಕ್ಷೆಯು ಏಪ್ರಿಲ್ 26 ರಿಂದ ಪ್ರಾರಂಭವಾಗಲಿದೆ. ಹಿರಿಯ ಅಧಿಕಾರಿಗಳ ಪ್ರಕಾರ, ಶಾಲೆಗಳಿಂದ ಪಡೆದ ಮನವಿಗಳ ಮೇರೆಗೆ ಏಕ ಪರೀಕ್ಷೆಯ ಮಾದರಿಯನ್ನು ಮರುಸ್ಥಾಪಿಸಲು ಮಂಡಳಿಯು ನಿರ್ಧರಿಸಿದೆ ಎನ್ನಲಾಗಿದೆ. ಮುಂದಿನ ವರ್ಷದಿಂದ ಎರಡು ಅವಧಿಗಳ ಬದಲಾಗಿ ಒಂದೇ ಬಾರಿ ಪರೀಕ್ಷೆಗಳು ನಡೆಯಲಿವೆ ಎಂದು ಅವರು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂದರೆ ಮಂಡಳಿಯ ಹಳೆ ಪರೀಕ್ಷೆಯ ಮಾದರಿಯನ್ನು ಮರುಸ್ಥಾಪಿಸಲಿದೆ ಎನ್ನಲಾಗಿದೆ.
ಇದನ್ನೂ ಓದಿ-ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ಕೊರೊನಾ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ
ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಇದೀಗ ಸಂಪೂರ್ಣ ಕ್ಷಮತೆಯೊಂದಿಗೆ ಶಾಲೆಗಳನ್ನು ತೆರೆಯಲಾಗಿದೆ. CBSE ವತಿಯಿಂದ ಪ್ರಸ್ತುತ ಯಾವುದೇ ರೀತಿಯ ಅಧಿಕೃತ ಘೋಷಣೆ ಮಾಡಲಾಗಿಲ್ಲವಾದರೂ ಕೂಡ ಶೀಘ್ರದಲ್ಲೇ ಈ ನಿರ್ಧಾರದ ಮೇಲೆ ಮಂಡಳಿ ತನ್ನ ಮುದ್ರೆಯೋತ್ತಲಿದೆ ಎನ್ನಲಾಗಿದೆ. ಕಳೆದ ವರ್ಷ ಕೊರೊನಾ ಕಾರಣ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಹಿಂದಿನ ಪರೀಕ್ಷೆಗಳಲ್ಲಿ ಪಡೆದ ಅಂಕಗಳು, ಪ್ರಾಯೋಗಿಕ ಪರೀಕ್ಷೆಗಳು ಮತ್ತು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ವಿದ್ಯಾರ್ಥಿಗಳ ಮೌಲ್ಯಮಾಪನ ನಡೆಸಲಾಗಿತ್ತು.
ಇದನ್ನೂ ಓದಿ-ನಿಮಗೆ ತೋಟಗಾರಿಕೆಯಲ್ಲಿ ಆಸಕ್ತಿ ಇದೆಯೇ? ಹಾಗಿದ್ದಲ್ಲಿ ನಿಮಗಿಲ್ಲೊಂದು ಸುವರ್ಣಾವಕಾಶ..!
ಪಠ್ಯಕ್ರಮದಲ್ಲಿ ಬಗ್ಗೆ ಮಂಡಳಿಯ ನಿರ್ಧಾರ ಏನು?
CBSE ಪಠ್ಯಕ್ರಮದ ಕುರಿತು ಹೇಳುವುದಾದರೆ, ಸಿಬಿಎಸ್‌ಇ ಮಂಡಳಿಯು ಪಠ್ಯಕ್ರಮವನ್ನು ಹೆಚ್ಚಿಸಲು ಒತ್ತು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಕೊರೊನಾ ವೈರಸ್ ಸೋಂಕಿನಿಂದಾಗಿ ಇದೀಗ CBSE ಬೋರ್ಡ್ ಪಠ್ಯಕ್ರಮದಲ್ಲಿ ಶೇ.30 ರಷ್ಟು ಕಡಿತಗೊಳಿಸಲಾಗಿದೆ, ಇದು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎನ್ನಲಾಗಿದೆ.
ಇದನ್ನೂ ನೋಡಿ-
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.