CIPET Mysuru: ವಿವಿಧ ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ
CIPET Mysuru: ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ.
ಮೈಸೂರು: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದೆ. ಈ ವೃತ್ತಿಪರ ಡಿಪ್ಲೋಮಾದ ಕೊನೆಯ ಸೆಮಿಸ್ಟರ್‍ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.
ಇದನ್ನೂ ಓದಿ: ನ್ಯಾಯಾಲಯದಲ್ಲಿ ಕೆಐಎಡಿಬಿ ಪ್ರಕರಣ: ಜುಲೈ 17ರೊಳಗೆ ಅಂತಿಮ ವರದಿ ಸಲ್ಲಿಕೆಗೆ ಸೂಚನೆ
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ(ವಿಜ್ಞಾನ), ಐಟಿಐ (ಫಿಟ್ಟರ್, ಟರ್ನರ್, ಮೆಕಾನಿಸ್ಟ್) ಮತ್ತು ಬಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ಹಾಜರಾದವರು ನೇರ ಪ್ರವೇಶ ಪಡೆಯಬಹುದು.
ಇದನ್ನೂ ಓದಿ: ಈ ವರ್ಷ ನಿರೀಕ್ಷೆಗಿಂತ ಕಡಿಮೆ ಮಳೆ; ಬೆಂಗಳೂರಿನ ನೀರು ನೆರೆ ಜಿಲ್ಲೆಗಳಿಗೆ
ಹೆಚ್ಚಿನ ಮಾಹಿತಿಗೆ ಸಿಪೆಟ್, 437/A, ಹೆಬ್ಬಾಳ್ ಇಂಡಸ್ಟ್ರೀಯಲ್ ಏರಿಯಾ, ಮೈಸೂರು-570016. ದೂ.ಸಂ.0821-2510618/ 9480253024/ 9791431827. ವೆಬ್‍ಸೈಟ್ www.cipet.gov.inನ್ನು ಸಂಪರ್ಕಿಸಬಹುದಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.