ಬೆಂಗಳೂರು: ಯುವನಿಧಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದನೇ ಗ್ಯಾರಂಟಿ 'ಯುವನಿಧಿ' ಯೋಜನೆ ಇಂದಿನಿಂದ ಜಾರಿಯಾಗಲಿದೆ. ಇಂದು ಬೆಳಗ್ಗೆ 11-30ಕ್ಕೆ ವಿಧಾನಸೌಧದ ಬ್ಯಾಂಕ್ವಿಟ್ ಹಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಯುವನಿಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ.


COMMERCIAL BREAK
SCROLL TO CONTINUE READING

ಯುವನಿಧಿ ಯೋಜನೆ: 
2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಯುವನಿಧಿ ಯೋಜನೆ ಸಿಗಲಿದೆ. ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇಲ್ಲ.


ಇದನ್ನೂ ಓದಿ- ಜಿಟಿಟಿಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ


ಯುವನಿಧಿ ಯೋಜನೆ ಸದುಪಯೋಗ ಪಡೆದುಕೊಳ್ಳಲು ಬೇಕಾದ ಅರ್ಹತೆಗಳೇನು?
* 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು.
* ಉನ್ನತ ಶಿಕ್ಷಣ ವ್ಯಾಸಾಂಗ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಬಹುದು.
* ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. 
* ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ.
* ಡಿಪ್ಲೋಮಾ ಹೊಂದಿರುವವರಿಗೆ 1,500 ರೂ. ಆರ್ಥಿಕ ನೆರವು.
* 2 ವರ್ಷದವರೆಗೆ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. 


ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?
>> ಯುವನಿಧಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು.
>> ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ ಇರಬೇಕು.
>> ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕು.
>> 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಫಲಾನುಭವಿಗೆ ಉದ್ಯೋಗ ಸಿಕ್ಕರೆ ತಕ್ಷಣವೇ ನಿರುದ್ಯೋಗ ಭತ್ಯೆಯನ್ನು ಸ್ಥಗಿತಗೊಳಿಸಲಾಗುತ್ತದೆ


ಇದನ್ನೂ ಓದಿ- ರಂಗಾಯಣದಿಂದ ನಾಟಕ ಕಲಿಕಾ ಶಿಬಿರ; ಆಸಕ್ತರಿಂದ ಅರ್ಜಿ ಆಹ್ವಾನ; ಜನವರಿ 6ರಂದು ಸಂದರ್ಶನ


ಇಂತಹವರು ಯುವನಿಧಿ ಯೋಜನೆಗೆ ಅರ್ಹರಾಗಿರುವುದಿಲ್ಲ:
* ಉನ್ನತ ವ್ಯಾಸಂಗಕ್ಕೆ ವಿದ್ಯಾಭ್ಯಾಸ ಮುಂದುವರೆಸುವವರಿಗೆ 
* Apprentice ವೇತನವನ್ನು ಪಡೆಯುತ್ತಿರುವವರು
* ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವವರಿಗೆ ಯೋಜನೆ ಅನ್ವಯವಾಗುವುದಿಲ್ಲ. 
* ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರಿಗೆ ಯೋಜನೆಯ ಫಲ ಸಿಗುವುದಿಲ್ಲ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.