ಬೆಂಗಳೂರು: ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲಾಗಿದೆ. 1,008 ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿದೆ. ಮುಂದಿನ ವರ್ಷದ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತ ಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ರಸ್ತೆ ಗುಂಡಿ ಸರಿ ಪಡಿಸಲು ನೂತನ ಆ್ಯಪ್ ಬಿಡುಗಡೆ ಮಾಡಿದ ಬಿಬಿಎಂಪಿ..! ನೀವು ಕೂಡ ದೂರು ನೀಡಬಹುದು..!
ಇನ್ನೂ 10 ಸಾವಿರದಿಂದ 12 ಸಾವಿರ ಶಿಕ್ಷಕರನ್ನು ನೇಮಕ
ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ 10 ಸಾವಿರದಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.