ಕೊಪ್ಪಳ : ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಮರ್ಪಕ ಸೇವಾ ಸಮಿತಿ ಮತ್ತು ವಿಜಯೋನ್ನತಿ ಸ್ಪರ್ಧಾತ್ಮಕ ತರಬೇತಿ ಸಂಸ್ಥೆ, ಕೊಪ್ಪಳ ಇವರ ಸಹಯೋಗದೊಂದಿಗೆ ಭಾರತೀಯ ಸೇನೆಯ ಅಗ್ನಿಪಥ್ ಹುದ್ದೆಗೆ ಲಿಖಿತ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಆಸಕ್ತ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- Viral Video: ರೀಲ್ಸ್‌ಗಾಗಿ ಸಂಚಾರ ದಟ್ಟಣೆಯ ರಸ್ತೆಯಲ್ಲಿ ಯುವತಿಯ ಹುಚ್ಚಾಟ!


ಜಿಲ್ಲೆಯ ಕನಿಷ್ಠ 17.5 ವರ್ಷದಿಂದ ಗರಿಷ್ಠ 21 ವರ್ಷ ವಯೋಮಿತಿಯುಳ್ಳ ಯುವಕರಿಗೆ ಲಿಖಿತ ಪರೀಕ್ಷೆ ತರಬೇತಿಯನ್ನು ನೀಡಲಾಗುವುದು. ಜನವರಿ ಎರಡನೇ ವಾರದಿಂದ ತರಬೇತಿಯನ್ನು ಪ್ರಾರಂಭ ಮಾಡುತ್ತಿದ್ದು, ಒಟ್ಟು 60 ಯುವಕರಿಗೆ ಮಾತ್ರ ಅವಕಾಶವಿದೆ. ಮೊದಲು ಬರುವ ಯುವಕರಿಗೆ ಪ್ರಥಮಾದ್ಯತೆ ನೀಡಲಾಗುವುದು. ಒಂದು ವೇಳೆ ಹೆಚ್ಚಿನ ಯುವಕರು ನೋಂದಾಯಿಸಿದ್ದಲ್ಲಿ, ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ಜರುಗಿಸಲಾಗುವುದು.


ಇದನ್ನೂ ಓದಿ- Baba Vanga: 2024ರಲ್ಲಿ ಇಡೀ ಜಗತ್ತಿಗೆ ಎದುರಾಗಲಿದೆ ದೊಡ್ಡ ಸಂಕಷ್ಟ! ಬಾಬಾ ವಂಗಾ ಭವಿಷ್ಯವೇನು?


ಆಸಕ್ತರು ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಇಲ್ಲಿ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಭಿಮೇಶ ಕುರಿ, ದೂ. ಸಂ: 9845858494 ಇವರನ್ನು ಸಂಪರ್ಕಿಸಬಹುದು ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.