Coffee Board Recruitment 2023: ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
Coffee Board Recruitment 2023: 2 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು 35 ವರ್ಷಗಳ ಒಳಗಿರಬೇಕು.
ಬೆಂಗಳೂರು: ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿಯಡಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಹುದ್ದೆಯ ವಿವರ: ಬೆಂಗಳೂರಿನ ಕಾಫಿ ಬೋರ್ಡ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 2 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಯುಎಸ್,ಈಜಿಪ್ಟ್ ನ ಐತಿಹಾಸಿಕ ಪ್ರವಾಸ ಮುಗಿಸಿ ಭಾರತಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಶೈಕ್ಷಣಿಕ ಅರ್ಹತೆ: ಕಾಫಿ ಬೋರ್ಡ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು .ವಯೋಮಿತಿ: ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 35 ವರ್ಷಗಳೊಳಗಿರಬೇಕು. ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, ಆಸಕ್ತರು ಅಧಿಕೃತ ಅಧಿಸೂಚನೆಯಲ್ಲಿ ಈ ಬಗ್ಗೆ ಪರಿಶೀಲಿಸಬಹುದು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ: ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ- cqd.coffeeboard@gmail.comಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
ಪ್ರಮುಖ ದಿನಾಂಕ: ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 23-07-2023 ಆಗಿರುತ್ತದೆ. ನೀವು ಕಳುಹಿಸುವ ಇ-ಮೇಲ್‍ನ subjectನಲ್ಲಿ “Application for the post of Technical assistants – Chemistry/Microbiology)” ಎಂದು ಬರೆದಿರಬೇಕು.
ಇದನ್ನೂ ಓದಿ: POK ವಿಚಾರದಲ್ಲಿ ಚೀನಾ - ಪಾಕ್‌ಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ
ಅರ್ಜಿ ಡೌನ್ಲೋಡ್ ಮಾಡುವುದು ಹೇಗೆ?: ಕಾಫಿ ಬೋರ್ಡ್ ಆಫ್ ಇಂಡಿಯಾದ ಅಧಿಕೃತ ವೆಬ್‍ಸೈಟ್‍ಗೆ ತೆರಳಿ ನೋಟಿಫಿಕೇಷನ್ ಬರುತ್ತಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್ indiacoffee.org ಮೇಲೆ ಕ್ಲಿಕ್ ಮಾಡಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.