ನವದೆಹಲಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 169 ಕಾನ್ಸ್​ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.


COMMERCIAL BREAK
SCROLL TO CONTINUE READING

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ತಿಳಿಯುವುದು ಮುಖ್ಯ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಹುದ್ದೆಯ ವಿವರ: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ 169 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


ಶೈಕ್ಷಣಿಕ ಅರ್ಹತೆ: ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Ram Mandir: ಅಯೋಧ್ಯೆ ರಾಮಮಂದಿರಕ್ಕೆ ಈವರೆಗೆ ಬಂದಿರುವ ದೇಣಿಗೆ ಎಷ್ಟು ಗೊತ್ತಾ?


ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 15, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ: ಒಬಿಸಿ (NCL) ಅಭ್ಯರ್ಥಿಗಳಿಗೆ 8 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.


ವೇತನ: ಮಾಸಿಕ ₹21,700- ₹69,100


ಉದ್ಯೋಗದ ಸ್ಥಳ: ಭಾರತ


ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 15  


ಅರ್ಜಿ ಶುಲ್ಕ: SC/ST/ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಆದರೆ UR/OBC/EWS ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕೆಂದು ತಿಳಿಸಲಾಗಿದೆ.


ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ದೈಹಿಕ ಪ್ರಮಾಣಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ವಿವರವಾದ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.


ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇರವಾಗಿ ಅರ್ಜಿ ಸಲ್ಲಿಸಲು ಸಂಸ್ಥೆಯ ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.  


ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/01/2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 15, 2024 ಆಗಿರುತ್ತದೆ.


ಇದನ್ನೂ ಓದಿ: TCS, Infosys ಕ್ಯಾಂಪಸ್‌ಗಳ ಬಳಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಶೋಧ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.