Job Alert: ತಿಂಗಳಿಗೆ ₹35,000 ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ

CSIR recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Mar 21, 2024, 11:47 PM IST
  • ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಸಿನಲ್ & ಆರೊಮ್ಯಾಟಿಕ್ ಪ್ಲಾಂಟ್ಸ್‌ನಲ್ಲಿ ನೇಮಕಾತಿ
  • ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
  • ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Job Alert: ತಿಂಗಳಿಗೆ ₹35,000 ಸಂಬಳ ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿ title=
Job Openings

CSIR recruitment 2024: ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಸಿನಲ್ ಮತ್ತು ಆರೊಮ್ಯಾಟಿಕ್ ಪ್ಲಾಂಟ್ಸ್‌ನಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್ I/II ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಮಾರ್ಚ್ 27ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಇದನ್ನೂ ಓದಿ: Daily GK Quiz: ದೀಪಾ ಕರ್ಮಾಕರ್ ಯಾವ ಕ್ರೀಡೆಗೆ ಹೆಸರುವಾಸಿಯಾಗಿದ್ದಾರೆ?

ಹುದ್ದೆಯ ಮಾಹಿತಿ: ಒಂದು ಪ್ರಾಜೆಕ್ಟ್​ ಅಸೋಸಿಯೇಟ್ I/II ಮತ್ತು ಒಂದು ಪ್ರಾಜೆಕ್ಟ್​ ಅಸೋಸಿಯೇಟ್ I ಹುದ್ದೆ ಖಾಲಿ ಇದೆ. 

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಮಾಸಿಕ ₹25,000- ₹35,000

ಉದ್ಯೋಗದ ಸ್ಥಳ: ಬೆಂಗಳೂರು

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ವೇತನ: ಪ್ರಾಜೆಕ್ಟ್​ ಅಸೋಸಿಯೇಟ್ I/IIಗೆ ಮಾಸಿಕ ₹25,000-₹31,000 ಮತ್ತು ಪ್ರಾಜೆಕ್ಟ್​ ಅಸೋಸಿಯೇಟ್ Iಗೆ ಮಾಸಿಕ ₹28,000-₹35,000

ಸಂದರ್ಶನ ನಡೆಯುವ ಸ್ಥಳ: CSIR-CIMAP ಸಂಶೋಧನಾ ಕೇಂದ್ರ, ಬೆಂಗಳೂರು, ಕರ್ನಾಟಕ

ಇದನ್ನೂ ಓದಿ: Lokasabha Election 2024: ಪಶ್ಚಿಮ ಬಂಗಾಳದ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವಜಾಗೊಳಿಸಲು ಚುನಾವಣಾ ಆಯೋಗ ಆದೇಶ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News