Delhi Technological University Recruitment 2024: ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 5 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬಿಇ ಅಥವಾ ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.


COMMERCIAL BREAK
SCROLL TO CONTINUE READING

ವಿದ್ಯಾರ್ಹತೆ: ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: H5N1 Bird Flu: ಮತ್ತೆ ಕೋವಿಡ್ ತರಹದ ವಿನಾಶ? ಹಕ್ಕಿ ಜ್ವರ 100 ಪಟ್ಟು ಹೆಚ್ಚು ಅಪಾಯಕಾರಿ!


ಉದ್ಯೋಗದ ಸ್ಥಳ: ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ವೇತನ: ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 27,050 ರೂ. ಸಂಬಳ ನೀಡಲಾಗುತ್ತದೆ.


ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.


ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಸಂದರ್ಶನ ನಡೆಯುವ ಸ್ಥಳ: ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸೆಮಿನಾರ್ ಕೊಠಡಿ, ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ, ನವದೆಹಲಿ


ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವು ದೊಡ್ಡ ವ್ಯಾಸವನ್ನು ಹೊಂದಿದೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ